AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSEDCL Recruitment 2023: ಸರ್ಕಾರಿ ಉದ್ಯೋಗ: 26 ಹುದ್ದೆಗಳಿಗೆ ಅರ್ಜಿ ಆಹ್ವಾನ

KSEDCL Recruitment 2023: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 18 ವರ್ಷಗಳಿಂದ 33 ವರ್ಷಗಳ ನಡುವೆ ಇರಬೇಕು.

KSEDCL Recruitment 2023: ಸರ್ಕಾರಿ ಉದ್ಯೋಗ: 26 ಹುದ್ದೆಗಳಿಗೆ ಅರ್ಜಿ ಆಹ್ವಾನ
KSEDCL Recruitment 2023
TV9 Web
| Edited By: |

Updated on: Jul 20, 2023 | 2:56 PM

Share

KSEDCL Recruitment 2023: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್​ನ (KSEDCL) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 22 ರಂದು ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಇದೀಗ ಜುಲೈ 31 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (KSEDCL)
  • ಹುದ್ದೆಗಳ ಸಂಖ್ಯೆ: 26
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಸಹಾಯಕ , ಸಹಾಯಕ ವ್ಯವಸ್ಥಾಪಕ

ಹುದ್ದೆಗಳ ವಿಭಾಗವಾರು ಮಾಹಿತಿ:

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ: 4 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) ಗ್ರೂಪ್-ಬಿ: 2 ಹುದ್ದೆಗಳು
  • ಖಾಸಗಿ ಕಾರ್ಯದರ್ಶಿ ಗ್ರೂಪ್-ಸಿ: 1 ಹುದ್ದೆ
  • ಹಿರಿಯ ಸಹಾಯಕ (ತಾಂತ್ರಿಕ) ಗ್ರೂಪ್-ಸಿ: 4 ಹುದ್ದೆಗಳು
  • ಹಿರಿಯ ಸಹಾಯಕ (ತಾಂತ್ರಿಕೇತರ) ಗ್ರೂಪ್-ಸಿ: 3 ಹುದ್ದೆಗಳು
  • ಸಹಾಯಕ (ತಾಂತ್ರಿಕ) ಗ್ರೂಪ್-ಸಿ: 6 ಹುದ್ದೆಗಳು
  • ಸಹಾಯಕ (ತಾಂತ್ರಿಕತೇರ) ಗ್ರೂಪ್-ಸಿ: 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)- ಎಲೆಕ್ಟ್ರಾನಿಕ್ಸ್/CS/IT/ECE ನಲ್ಲಿ ಇಂಜಿನಿಯರಿಂಗ್ ಪದವಿ
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕತೇರ): ಪದವಿ ಪೂರ್ಣಗೊಳಿಸಿರಬೇಕು.
  • ಖಾಸಗಿ ಕಾರ್ಯದರ್ಶಿ – ಎಲೆಕ್ಟ್ರಾನಿಕ್ಸ್/CS/IT/ECE ನಲ್ಲಿ ಇಂಜಿನಿಯರಿಂಗ್ ಪದವಿ
  • ಹಿರಿಯ ಸಹಾಯಕ (ತಾಂತ್ರಿಕ)- ಎಲೆಕ್ಟ್ರಾನಿಕ್ಸ್/CS/IT/ECE ನಲ್ಲಿ ಇಂಜಿನಿಯರಿಂಗ್ ಪದವಿ
  • ಹಿರಿಯ ಸಹಾಯಕ (ತಾಂತ್ರಿಕೇತರ)- ಪದವಿ ಪೂರ್ಣಗೊಳಿಸಿರಬೇಕು
  • ಸಹಾಯಕ (ತಾಂತ್ರಿಕ)- ಎಲೆಕ್ಟ್ರಾನಿಕ್ಸ್/CS/IT/ECE ನಲ್ಲಿ ಇಂಜಿನಿಯರಿಂಗ್ ಪದವಿ
  • ಸಹಾಯಕ (ತಾಂತ್ರಿಕತೇರ)- ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 18 ವರ್ಷಗಳಿಂದ 33 ವರ್ಷಗಳ ನಡುವೆ ಇರಬೇಕು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 02 ವರ್ಷಗಳು

ಅರ್ಜಿ ಶುಲ್ಕ:

  • PWD & Ex-Servicemen ಅಭ್ಯರ್ಥಿಗಳು: ರೂ.250/-
  • SC/ST ಮತ್ತು Cat-I ಅಭ್ಯರ್ಥಿಗಳು: ರೂ.750/-
  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು: ರೂ.1000/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: keonics.in

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ