KSFC Recruitment 2023: ಸರ್ಕಾರಿ ಉದ್ಯೋಗ: ಪದವೀಧರರಿಗೆ ಸುವರ್ಣಾವಕಾಶ
KSFC Recruitment 2023: ಈ ಹುದ್ದೆಗಳಿಗೆ 25 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PWD ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 41 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಅರ್ಜಿ ನಮೂನೆಯನ್ನು ಅಂಚೆ ಕಚೇರಿಯ ಅಥವಾ ಇನ್ನಿತರ ಮಾರ್ಗಗಳ ಮೂಲಕ ಕಳುಹಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)-11 ಹುದ್ದೆಗಳು
- ಡೆಪ್ಯುಟಿ ಮ್ಯಾನೇಜರ್ (ಲೀಗಲ್) – 18 ಹುದ್ದೆಗಳು
- ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್ ಮತ್ತು ಅಕೌಂಟ್ಸ್)- 12 ಹುದ್ದೆಗಳು
ಅರ್ಹತಾ ಮಾನದಂಡಗಳು:
- ಡೆಪ್ಯುಟಿ ಮ್ಯಾನೇಜರ್(ಟೆಕ್ನಿಕಲ್)- ಈ ಹುದ್ದೆಗಳಿಗೆ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಡೆಪ್ಯುಟಿ ಮ್ಯಾನೇಜರ್ (ಲೀಗಲ್) – ಕಾನೂನು ವಿಷಯದಲ್ಲಿ ಪದವಿ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಡೆಪ್ಯುಟಿ ಮ್ಯಾನೇಜರ್ (ಫೈನಾನ್ಸ್ ಅ್ಯಂಡ್ ಅಕೌಂಟ್ಸ್)- ACA/ ICWA/ MBA/ M.Com/ CFA ಅಥವಾ PGDMA ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 25 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PWD ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 52,650 ರಿಂದ 97,100 ರೂ.ವರೆಗೆ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 18, 2023
ಅರ್ಜಿ ಕಳುಹಿಸಬೇಕಾದ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಎಫ್‌ಸಿ ಕೇಂದ್ರ ಕಚೇರಿ, ಕೆಎಸ್‌ಎಫ್‌ಸಿ ಭವನ, ನಂ.1/1, ತಿಮ್ಮಯ್ಯ ರಸ್ತೆ, ಬೆಂಗಳೂರು 560052
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.
ಈ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 7:39 pm, Thu, 16 February 23