AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSMHA Recruitment 2025: ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತಾ ವಿವರ ಇಲ್ಲಿದೆ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು ಬೆಂಗಳೂರಿನಲ್ಲಿ ಕಾರ್ಯಕ್ರಮ ಮತ್ತು ಕಾನೂನು ಸಲಹೆಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಾಸಿಕ 50,000-80,000 ರೂ. ವೇತನದ ಈ ಹುದ್ದೆಗಳಿಗೆ ಪದವಿ, ಎಲ್‌ಎಲ್‌ಬಿ, ಎಂಡಿ, ಡಿಪಿಎಂ, ಡಿಎನ್‌ಬಿ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಡಿಸೆಂಬರ್ 23 ರಂದು ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಇದು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ.

KSMHA Recruitment 2025: ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತಾ ವಿವರ ಇಲ್ಲಿದೆ
ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on:Dec 12, 2025 | 5:43 PM

Share

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(Karnataka State Mental Health Authority) ವು ಅಧಿಕೃತ ಅಧಿಸೂಚನೆಯ ಮೂಲಕ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು
  • ಹುದ್ದೆಯ ಹೆಸರು: ಕಾರ್ಯಕ್ರಮ ಮತ್ತು ಕಾನೂನು ಸಲಹೆಗಾರ(Programme Consultant and Legal Consultant)
  • ಸಂಬಳ: ತಿಂಗಳಿಗೆ 50,000 – 80,000 ರೂ.

ವಯಸ್ಸಿನ ಮಿತಿ:

  • ಕಾರ್ಯಕ್ರಮ ಸಲಹೆಗಾರ- ಗರಿಷ್ಠ 40 ವರ್ಷ
  • ಕಾನೂನು ಸಲಹೆಗಾರ -ಗರಿಷ್ಠ 50 ವರ್ಷ

ಶೈಕ್ಷಣಿಕ ಅರ್ಹತೆ:

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಎಲ್‌ಎಲ್‌ಬಿ, ಎಂಡಿ, ಡಿಪಿಎಂ, ಡಿಎನ್‌ಬಿ ಪೂರ್ಣಗೊಳಿಸಿರಬೇಕು.

  • ಕಾರ್ಯಕ್ರಮ ಸಲಹೆಗಾರ- ಪದವಿ , ಎಂಡಿ, ಡಿಪಿಎಂ, ಡಿಎನ್‌ಬಿ
  • ಕಾನೂನು ಸಲಹೆಗಾರ- ಕಾನೂನು ಪದವಿ, ಎಲ್‌ಎಲ್‌ಬಿ

ವೇತನದ ವಿವರಗಳು:

  • ಕಾರ್ಯಕ್ರಮ ಸಲಹೆಗಾರ- 80,000 ರೂ.
  • ಕಾನೂನು ಸಲಹೆಗಾರ- 50,000 ರೂ.

ಇದನ್ನೂ ಓದಿ: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10 ನೇ ತರಗತಿ ಪಾಸಾಗಿದ್ರೆ ಸಾಕು

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ: ನಿರ್ದೇಶಕರ ಕಚೇರಿ, HFW ಮತ್ತು ಸದಸ್ಯ ಕಾರ್ಯದರ್ಶಿ, KSMHA, 6 ನೇ ಮಹಡಿ, ಆರೋಗ್ಯ ಸೌಧ, ಮಾಗಡಿ ರಸ್ತೆ, ಕ್ರಾಂತಿವೀರ ಸಂಗೋಳಿ ರಾಯಣ್ಣ ಮೆಟ್ರೋ ನಿಲ್ದಾಣದ ಎದುರು, ಬೆಂಗಳೂರು-560023.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 12 December 25

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್