KSP Recruitment 2025: ಬೆಂಗಳೂರಿನಲ್ಲಿ ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ ಹುದ್ದೆಗೆ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ (KSP) ಬೆಂಗಳೂರಿನಲ್ಲಿ ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. BCA, BE, B.Tech, MCA, M.Sc ಪದವೀಧರರು (25-35 ವಯಸ್ಸು) ಅಕ್ಟೋಬರ್ 29 ರೊಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 50,000 ರೂ. ವೇತನ ಸಿಗಲಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

KSP Recruitment 2025: ಬೆಂಗಳೂರಿನಲ್ಲಿ ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ ಹುದ್ದೆಗೆ ನೇಮಕಾತಿ
ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್

Updated on: Oct 19, 2025 | 5:46 PM

ಕರ್ನಾಟಕ ರಾಜ್ಯ ಪೊಲೀಸ್​(KSP) ಅಧಿಕೃತ ಅಧಿಸೂಚನೆಯ ಮೂಲಕ ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 29ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50000 ರೂ. ವೇತನ ಸಿಗಲಿದೆ.

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: KSP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BCA, BE ಅಥವಾ B.Tech , MCA, M.Sc ಪೂರ್ಣಗೊಳಿಸಿರಬೇಕು.
  • ವಯಸ್ಸಿನ ಮಿತಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.
  • ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ನಂ. 01, ಇನ್‌ಫೆಂಟ್ರಿ ರಸ್ತೆ, ಪೊಲೀಸ್ ಆಯುಕ್ತರು, ಬೆಂಗಳೂರು-560001 ಗೆ ಅಥವಾ dcpadminbcp@ksp.gov.in ಗೆ ಇಮೇಲ್ ಮೂಲಕ ಅಕ್ಟೋಬರ್ 29 ರಂದು ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ