KSP Recruitment 2021: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ

KSP Recruitment 2021: ಸಾಮಾನ್ಯ ಮತ್ತು OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಎಸ್‌ಸಿ, ಎಸ್‌ಟಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಪಾವತಿಸಬೇಕಾಗುತ್ತದೆ.

KSP Recruitment 2021: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 29, 2021 | 4:41 PM

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 71 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 27, 2022ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 26 ವರ್ಷ ವಯೋಮಿತಿಯೊಳಗಿರಬೇಕು. ಇನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ (SC,ST,CAT-01, 2A,2B,3A & 3B) ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಅದರಂತೆ ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟದ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 500 ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://rsi21.ksponline.co.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಪ್ರಮುಖ ದಿನಾಂಕ: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ಡಿಸೆಂಬರ್ 28, 2021. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 27, 2022. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಜನವರಿ 29, 2022.

ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಯಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್