ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 71 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 27, 2022ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 26 ವರ್ಷ ವಯೋಮಿತಿಯೊಳಗಿರಬೇಕು. ಇನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ (SC,ST,CAT-01, 2A,2B,3A & 3B) ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಅದರಂತೆ ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟದ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 500 ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rsi21.ksponline.co.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
ಪ್ರಮುಖ ದಿನಾಂಕ:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ಡಿಸೆಂಬರ್ 28, 2021.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 27, 2022.
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಜನವರಿ 29, 2022.
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಯಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!
ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ