KSP Recruitment 2023: ಕೆಎಸ್​ಪಿಯ 25 ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು, ಎಷ್ಟು ವೇತನ ಸಿಗಲಿದೆ, ಅರ್ಜಿ ನಮೂನೆಯನ್ನು ಎಲ್ಲಿ ಡೌನ್​ಲೋಡ್ ಮಾಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

KSP Recruitment 2023: ಕೆಎಸ್​ಪಿಯ 25 ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಕೆಎಸ್​ಪಿ
Follow us
TV9 Web
| Updated By: ನಯನಾ ಎಸ್​ಪಿ

Updated on: Feb 25, 2023 | 5:05 PM

ಫೆಬ್ರವರಿ 2023 ರ KSP ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಇಂದೇ ಕೆಎಸ್​ಪಿಯ 25 ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ಅರಸುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 08-Mar-2023 ರಂದು ಅಥವಾ ಮೊದಲು ಆಫ್‌ಲೈನ್‌ ಮೋಡ್​ನಲ್ಲಿ ಅರ್ಜಿ ಸಲ್ಲಿಸಿ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು, ಎಷ್ಟು ವೇತನ ಸಿಗಲಿದೆ, ಅರ್ಜಿ ನಮೂನೆಯನ್ನು ಎಲ್ಲಿ ಡೌನ್​ಲೋಡ್ ಮಾಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

KSP ಹುದ್ದೆಯ ಅಧಿಸೂಚನೆ

  • ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)
  • ಹುದ್ದೆಗಳ ಸಂಖ್ಯೆ: 25
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ತಾಂತ್ರಿಕ ಸಿಬ್ಬಂದಿ
  • ಸಂಬಳ: ಕೆಎಸ್‌ಪಿ ನಿಯಮಗಳ ಪ್ರಕಾರ

KSP ಹುದ್ದೆಯ ವಿವರಗಳು

  • ಬೋಟ್ ಕ್ಯಾಪ್ಟನ್ 6 ಹುದ್ದೆಗಳು ಖಾಲಿ
  • ಸಹಾಯಕ ಬೋಟ್ ಕ್ಯಾಪ್ಟನ್ 7 ಹುದ್ದೆಗಳು ಖಾಲಿ
  • ಮೋಟಾರ್ ಲಾಂಚ್ ಮೆಕ್ಯಾನಿಕ್ 2 ಹುದ್ದೆಗಳು ಖಾಲಿ
  • ಇಂಜಿನ್ ಡ್ರೈವರ್ 10 ಹುದ್ದೆಗಳು ಖಾಲಿ

ಲಿಖಿತ ಪರೀಕ್ಷೆ ಮತ್ತು ಮೌಖೀಕ  ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಅಂಚೆ ಅಥವಾ ಇನ್ನಿತರ  ವಿಧಾನಗಳ ಮೂಲಕ ಅರ್ಜಿಗಳನ್ನು ಕಳುಹಿಸಬಹುದು.

KSP ತಾಂತ್ರಿಕ ಸಿಬ್ಬಂದಿ ಉದ್ಯೋಗಗಳು 2023 ಗೆ ಅರ್ಜಿ ಸಲ್ಲಿಸಲು ಕ್ರಮಗಳು

  • ಮೊದಲನೆಯದಾಗಿ KSP ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿದ  ನಂತರ ಅರ್ಜಿ ಸಲ್ಲಿಸಲಿಚ್ಛಿಸುವವರು  ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಇಟ್ಟುಕೊಂಡಿರಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ.

ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ:

Superintendent of Police, Coast Guard Police, Udupi and Member Technical Staff Recruitment Committee, Karnataka – 576101

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 08, 2023

ಈ ಹುದ್ದೆಗಳಿಗೆ ಅದಿಕ್ರುತ ಅಧಿಸೂಚನೆಯನ್ನು ನೋಡಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ