Karnataka Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KSRLPS ಯ ಅಧಿಕೃತ ವೆಬ್ಸೈಟ್ jobsksrlps.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ (KSRLPS) ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 41 ಹುದ್ದೆಗಳನನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KSRLPS ಯ ಅಧಿಕೃತ ವೆಬ್ಸೈಟ್ jobsksrlps.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಯ ಹೆಸರು- ಬ್ಲಾಕ್ ಮ್ಯಾನೇಜರ್ ಮತ್ತು ಕ್ಲಸ್ಟರ್ ಸೂಪರ್ವೈಸರ್
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ಕ್ಲಸ್ಟರ್ ಸೂಪರ್ವೈಸರ್: ಈ ಹುದ್ದೆಗಳಿಗೆ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕು ಪ್ರೋಗ್ರಾಮ್ ಮ್ಯಾನೇಜರ್: ಸ್ನಾತಕೋತ್ತರ ಪದವಿ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಆಫೀಸ್ ಅಸಿಸ್ಟೆಂಟ್: ಪದವಿ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಡಿಸ್ಟ್ರಿಕ್ಟ್ ಮ್ಯಾನೇಜರ್ (ಫಾರ್ಮ್ ಲೈವ್ಲಿಹುಡ್): ಬಿಎಸ್ಸಿ, ಎಂಎಸ್ಸಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.
ಕ್ಲಸ್ಟರ್ ಸೂಪರ್ವೈಸರ್ (ಸ್ಕಿಲ್): ಪದವಿ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಬ್ಲಾಕ್ ಮ್ಯಾನೇಜರ್ (ನಾನ್ ಫಾರ್ಮ್ ಲೈವ್ಲಿಹುಡ್): ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ ಹಾಕಬಹುದು.
ಬ್ಲಾಕ್ ಮ್ಯಾನೇಜರ್ (ಫಾರ್ಮ್ ಲೈವ್ಲಿಹುಡ್): ಬಿಎಸ್ಸಿ, ಎಂಎಸ್ಸಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿಭಿನ್ನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ಈ ಎಲ್ಲಾ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ- ಜನವರಿ 15, 2023. ಇತರೆ ದಿನಾಂಕಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಉದ್ಯೋಗದ ಸ್ಥಳ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಕೊಡಗು, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.