AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRLPS Recruitment 2025: ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; ಪದವೀಧರರು ಅರ್ಹರು

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS) ಹಾಸನದಲ್ಲಿ 10 ಬ್ಲಾಕ್ ಮ್ಯಾನೇಜರ್ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನವೆಂಬರ್ 21ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಪರಿಶೀಲಿಸಿ.

KSRLPS Recruitment 2025: ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; ಪದವೀಧರರು ಅರ್ಹರು
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ
ಅಕ್ಷತಾ ವರ್ಕಾಡಿ
|

Updated on: Nov 20, 2025 | 4:57 PM

Share

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘವು(KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಹಾಸನದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 21ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ ( KSRLPS )
  • ಹುದ್ದೆಗಳ ಸಂಖ್ಯೆ: 10
  • ಹುದ್ದೆಯ ಸ್ಥಳ: ಹಾಸನ
  • ಹುದ್ದೆಯ ಹೆಸರು: ಬ್ಲಾಕ್ ಮ್ಯಾನೇಜರ್, ಕಚೇರಿ ಸಹಾಯಕ

ಶೈಕ್ಷಣಿಕ ಅರ್ಹತೆ:

KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, ಪದವಿ, M.Sc, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ KSRLPS ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಬ್ಲಾಕ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಯದಾಗಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?