AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Recruitment 2022: ಕೆಎಸ್​ಆರ್​ಟಿಸಿಯಲ್ಲಿ 350 ಚಾಲಕರ ನೇಮಕಾತಿ

KSRTC Recruitment 2022: ಈ ಯೋಜನೆಯ ಮೂಲಕ ನೇಮಕ ಮಾಡಲಾಗುವ ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಕೆಎಸ್​ಆರ್​ಟಿಸಿ ನಿಯಮದಂತೆ ಕ್ರಮಗಳನ್ನು  ಕೈಗೊಳ್ಳಲಾಗುತ್ತದೆ. ಅಂದರೆ ಈಗಿರುವ ಚಾಲಕರಿಗೆ ಅನ್ವಯಿಸುವ ಎಲ್ಲಾ ನಿಯಮಗಳು ಗುತ್ತಿಗೆ ಆಧಾರದಲ್ಲಿರುವ ಚಾಲಕರಿಗೆ ಅನ್ವಯವಾಗಲಿದೆ.

KSRTC Recruitment 2022: ಕೆಎಸ್​ಆರ್​ಟಿಸಿಯಲ್ಲಿ 350 ಚಾಲಕರ ನೇಮಕಾತಿ
KSRTC Recruitment 2022
TV9 Web
| Edited By: |

Updated on: Aug 01, 2022 | 5:14 PM

Share

KSRTC Recruitment: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಚಾಲಕರ ಕೊರತೆಯನ್ನು ಸರಿದೂಗಿಸಲು ವಿಶೇಷ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ. ಈ ಯೋಜನೆ ಅಡಿಯಲ್ಲಿ ಒಟ್ಟು 350 ಡ್ರೈವರ್​ಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದೆ. ಆದರೆ ಈ ನೇಮಕಾತಿಯು ಗುತ್ತಿಗೆ ಆಧಾರದಲ್ಲಿ ಮಾತ್ರ ನಡೆಯಲಿದ್ದು, ಇದಕ್ಕಾಗಿ ಖಾಸಗಿ ಕಂಪೆನಿಗಳಿಗೆ ಹೊರಗುತ್ತಿಗೆ ನೀಡಲಾಗುತ್ತಿದೆ. ಈ ಮೂಲಕ 10 ಕೋಟಿ ವೆಚ್ಚದಲ್ಲಿ ಒಟ್ಟು 350 ಚಾಲಕರುಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.

ಎಲ್ಲೆಲ್ಲಿ ಸಿಗಲಿದೆ ಉದ್ಯೋಗ: ಈ ಯೋಜನೆಯ ಅಡಿಯಲ್ಲಿ ಮಂಗಳೂರು 150, ಪುತ್ತೂರು 100, ರಾಮನಗರ ಮತ್ತು ಚಾಮರಾಜನಗರ ಕೆಎಸ್​ಆರ್​ಟಿಸಿ ಡಿಪೋಗಳಿಗೆ ತಲಾ 50 ಚಾಲಕರನ್ನು ನೇಮಕ ಮಾಡಲಾಗುತ್ತದೆ.

ವೇತನ: ಕೆಎಸ್​ಆರ್​ಟಿಸಿಯಲ್ಲಿ ಗುತ್ತಿಗೆ ಆಧಾರ ಮೇಲೆ ನೇಮಕವಾಗುವ ಸಿಬ್ಬಂದಿಗಳಿಗೆ 25 ದಿನಗಳ ಹಾಜರಾತಿಗೆ ತಕ್ಕಂತೆ ಸಂಭಾವನಾ ವೇತನವಾಗಿ 23,000 ರೂಪಾಯಿ ನೀಡಲಾಗುತ್ತದೆ. ಇನ್ನು ಚಾಲಕ 25 ದಿನಗಳವರೆಗೆ ಸೇವೆಯನ್ನು ಬಳಸಿಕೊಳ್ಳದಿದ್ದರೆ ಪ್ರತಿ ಗಂಟೆಗೆ ಸ್ಟೀರಿಂಗ್ ಮತ್ತು ಪ್ರೋತ್ಸಾಹಕವಾಗಿ 100 ರೂ. ಅನ್ನು ವೇತನವಾಗಿ ನಿಗದಿಪಡಿಸಲಾಗುತ್ತದೆ. ಇದಾಗ್ಯೂ ನಿಯಮಿತ ನೌಕರರಿಗೆ ನೀಡುವ ಯಾವುದೇ ಭತ್ಯೆಯನ್ನು ಚಾಲಕರು ಪಡೆಯುವುದಿಲ್ಲ.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಎಸ್​ಆರ್​ಟಿಸಿ ನೇಮಕಾತಿಯಲ್ಲಿ ಈ ಬದಲಾವಣೆ ಯಾಕೆ? ಈ ಹೊಸ ಯೋಜನೆಯ ಮೂಲಕ ಕೆಎಸ್‌ಆರ್‌ಟಿಸಿ ವೇತನ ವೆಚ್ಚವನ್ನು ಕಡಿತಗೊಳಿಸುವ ಆಶಯ ಹೊಂದಿದೆ. ಪ್ರಸ್ತುತ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ, ಚಾಲಕರನ್ನು ನೇಮಿಸಿಕೊಳ್ಳಲು ಸರ್ಕಾರದಿಂದ ಅನುಮತಿ ಪಡೆಯಲಾಗುವುದಿಲ್ಲ. ಈಗ ಅಸ್ತಿತ್ವದಲ್ಲಿರುವ ನೌಕರರು ಮಂಗಳೂರು ಮತ್ತು ಪುತ್ತೂರಿನಂತಹ ಸ್ಥಳಗಳಲ್ಲಿ ಕೆಲಸ ಮಾಡಲು ಬಯಸುವುದಿಲ್ಲ, ಮತ್ತೊಂದೆಡೆ, ಸಾರಿಗೆ ಸೇವೆಗಳನ್ನು ಒದಗಿಸಲು ನಮಗೆ ಕನಿಷ್ಠ 1,000 ಹೆಚ್ಚುವರಿ ಚಾಲಕರ ಅಗತ್ಯವಿದೆ. ಪ್ರಯಾಣದ ಬೇಡಿಕೆಗೆ ಅನುಗುಣವಾಗಿ, ಈಗ ಟೆಂಡರ್ ಮೂಲಕ ನಾವು ಚಾಲಕರನ್ನು ಗುತ್ತಿಗೆಯ ಮೇಲೆ ನೇಮಿಸಲು ಮುಂದಾಗಿದ್ದೇವೆ ಎಂದು ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಎಸ್​ಆರ್​ಟಿಸಿ ನಿಯಮ ಅನ್ವಯ: ಈ ಯೋಜನೆಯ ಮೂಲಕ ನೇಮಕ ಮಾಡಲಾಗುವ ಸಿಬ್ಬಂದಿಗಳ ವಿರುದ್ದ ಪ್ರಸ್ತುತ ಕೆಎಸ್​ಆರ್​ಟಿಸಿ ನಿಯಮದಂತೆ ಕ್ರಮಗಳನ್ನು  ಕೈಗೊಳ್ಳಲಾಗುತ್ತದೆ. ಅಂದರೆ ಈಗಿರುವ ಚಾಲಕರಿಗೆ ಅನ್ವಯಿಸುವ ಎಲ್ಲಾ ನಿಯಮಗಳು ಗುತ್ತಿಗೆ ಆಧಾರದಲ್ಲಿರುವ ಚಾಲಕರಿಗೆ ಅನ್ವಯವಾಗಲಿದೆ. ಇನ್ನು ಸುರಕ್ಷತಗೆ ಆದ್ಯತೆ ನೀಡಲು ಇಲಾಖೆಯಿಂದ ದಂಡ ಸೇರಿದಂತೆ ಅಗತ್ಯ ಷರತ್ತುಗಳನ್ನು ಜಾರಿಗೊಳಿಸಲಾಗುತ್ತದೆ. ಇನ್ನು, ಕಳ್ಳತನ ಅಥವಾ ವಂಚನೆಯಂತಹ ಚಾಲಕರ ದುರ್ವರ್ತನೆಗಳಿಗೆ ಏಜೆನ್ಸಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿ ತಿಳಿಸಿದ್ದಾರೆ.

ಕೆಎಸ್​ಆರ್​ಟಿಸಿ ಖಾಸಗೀಕರಣ..? ಇದು ಕೆಎಸ್​ಆರ್​ಟಿಸಿ ಸಂಸ್ಥೆಯ ಖಾಸಗೀಕರಣದ ಮೊದಲ ಹೆಜ್ಜೆಯಾಗಿದೆ. ಅಲ್ಲದೆ ಸಾರ್ವಜನಿಕ ಸಾರಿಗೆಯ ಕಲ್ಪನೆಗೆ ಇದು ದೊಡ್ಡ ಹೊಡೆತ ನೀಡಲಿದೆ. ಏಕೆಂದರೆ ಬಸ್ ಚಾಲಕನ ಕೆಲಸವು ಬಹಳಷ್ಟು ಅಪಾಯವನ್ನು ಒಳಗೊಂಡಿರುತ್ತದೆ. ಇದಾಗ್ಯೂ ಅವರು ಕೇವಲ 25 ಸಾವಿರ ರೂ.ಗೆ ಕೆಲಸ ಮಾಡುತ್ತಾರೆ ಎಂದು ಹೇಗೆ ನಿರೀಕ್ಷಿಸಲಾಗುತ್ತಿದೆ?. ಅಲ್ಲದೆ ಖಾಸಗಿ ಉದ್ಯೋಗಿಯು ಪ್ರಸ್ತುತ ಇರುವ ಉದ್ಯೋಗಿಗಳಂತೆ ಬದ್ಧರಾಗಿರುವುದಿಲ್ಲ. ಇದಾಗ್ಯೂ ಕೆಎಸ್​ಆರ್​ಟಿಸಿಯನ್ನು ಖಾಸಗೀಕರಣಗೊಳಿಸಲು ಇಂತಹದೊಂದು ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಸಮಿತಿಯ ಎಚ್‌. ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ