KVS Recruitment 2022: ಕೇಂದ್ರೀಯ ವಿದ್ಯಾಲಯದ 6990 ಹುದ್ದೆಗಳಿಗೆ ಅರ್ಜಿ ಆಹ್ವಾನ
KVS Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KVS ನ ಅಧಿಕೃತ ವೆಬ್ಸೈಟ್ kvsangathan.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
KVS Recruitment 2022: ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗ ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ, ಕೆವಿಎಸ್ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KVS ನ ಅಧಿಕೃತ ವೆಬ್ಸೈಟ್ kvsangathan.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ-6990
- ಅಸಿಸ್ಟೆಂಟ್ ಕಮಿಷನರ್: 52 ಹುದ್ದೆಗಳು
- ಪ್ರಿನ್ಸಿಪಾಲ್: 239 ಹುದ್ದೆಗಳು
- ವೈಸ್ ಪ್ರಿನ್ಸಿಪಾಲ್: 203
- ಹುದ್ದೆಗಳು ಪಿಜಿಟಿ: 1409 ಹುದ್ದೆಗಳು
- ಟಿಜಿಟಿ: 3176 ಹುದ್ದೆಗಳು
- ಲೈಬ್ರೇರಿಯನ್: 355 ಹುದ್ದೆಗಳು
- ಪ್ರಾಥಮಿಕ ಶಿಕ್ಷಕರು: 303 ಹುದ್ದೆಗಳು
- ಹಣಕಾಸು ಅಧಿಕಾರಿ: 6 ಹುದ್ದೆಗಳು
- ಸಹಾಯಕ ಎಂಜಿನಿಯರ್: 2 ಹುದ್ದೆಗಳು
- ಸಹಾಯಕ ಸೆಕ್ಷನ್ ಆಫೀಸರ್: 156 ಹುದ್ದೆಗಳು
- ಹಿಂದಿ ಟ್ರಾನ್ಸ್ಲಾಟರ್: 156 ಹುದ್ದೆಗಳು 11 ಹುದ್ದೆಗಳು
- ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್: 322 ಹುದ್ದೆಗಳು
- ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್: 702 ಪೋಸ್ಟ್
- ಸ್ಟೆನೋಗ್ರಾಫರ್ ಗ್ರೇಡ್ II: 54 ಹುದ್ದೆಗಳು
ಅರ್ಹತಾ ಮಾನದಂಡಗಳು:
ಆಯಾ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬಹುದಾಗಿದೆ.
ಅರ್ಜಿ ಶುಲ್ಕ:
- ಜನರಲ್/ OBC/ EWS: ₹ 1000 /-
- SC/ST/ PwD/ ESM: ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕ್ಲಾಸ್ ಡೆಮೊ / ಸಂದರ್ಶನ / ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ – ಡಿಸೆಂಬರ್ 5, 2022
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 26, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.