KVS Recruitment 2023: 6414 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: Digi Tech Desk

Updated on: Jan 02, 2023 | 2:36 PM

KVS Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರೀಯ ವಿದ್ಯಾಲಯ ಸಂಘಟನೆಯ ವೆಬ್‌ಸೈಟ್ kvsangathan.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KVS Recruitment 2023: 6414 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
Follow us on

KVS Recruitment 2023: ನೀವು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಕೇಂದ್ರೀಯ ವಿದ್ಯಾಲಯದಲ್ಲಿದೆ ಉದ್ಯೋಗಾವಕಾಶ. ಕೇಂದ್ರೀಯ ವಿದ್ಯಾಲಯ ಸಂಘಟನೆಯು 6414 ಪ್ರಾಥಮಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರೀಯ ವಿದ್ಯಾಲಯ ಸಂಘಟನೆಯ ವೆಬ್‌ಸೈಟ್ kvsangathan.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 6414

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡ:

  • ಶೈಕ್ಷಣಿಕ ಅರ್ಹತೆ- ಕನಿಷ್ಠ 50% ಅಂಕಗಳೊಂದಿಗೆ 12ನೇ ಮತ್ತು ಎರಡು ವರ್ಷಗಳ D.El.Ed ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ನೀವು DLED ಬದಲಿಗೆ 4 ವರ್ಷಗಳ BLED ಮಾಡಿದರೂ ಸಹ ಅರ್ಜಿ ಸಲ್ಲಿಸಬಹುದು. ಬಿ.ಎಲ್.ಇಡಿಯಲ್ಲಿ ಶೇ.50ರಷ್ಟು ಅಂಕ ಬೇಕಿರುವುದು ಕಡ್ಡಾಯವಿಲ್ಲ. ಅಥವಾ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಾಸಾಗಿದ್ದರೆ, B.Ed ನಲ್ಲಿ 50% ಅಂಕ ಕಡ್ಡಾಯವಿಲ್ಲ ಎಂದು ತಿಳಿಸಲಾಗಿದೆ.
  • ಅಭ್ಯರ್ಥಿಗಳು CTET ಪೇಪರ್-I ನಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೇ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವಲ್ಲಿ ಪ್ರಾವೀಣ್ಯತೆ ಇರಬೇಕು.
  • ಅಪೇಕ್ಷಣೀಯ ವಿದ್ಯಾರ್ಹತೆ- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷಗಳು. ಎಸ್‌ಸಿ/ಎಸ್‌ಟಿಗೆ 5 ವರ್ಷ, ಒಬಿಸಿಗೆ 3 ವರ್ಷ, ಮಹಿಳೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಕರ ಮಾಸಿಕ ಮೂಲ ವೇತನ 35400 ರೂ. ಅದರಂತೆ 35400 ರಿಂದ 112400/ ರೂ. ವರೆಗೆ ವೇತನ ಸಿಗಲಿದೆ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

ಈ ಹುದ್ದೆಗಳ ಅರ್ಜಿ ಶುಲ್ಕವಾಗಿ 1500 ರೂ. ಪಾವತಿಸಬೇಕಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 2, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

Published On - 2:18 pm, Wed, 28 December 22