AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಅಥವಾ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ ಮತ್ತು ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ
ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on: Feb 19, 2026 | 6:03 PM

Share

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಶೈಕ್ಷಣಿಕ ಅರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವ ವಿಳಾಸ:

ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:

ಸದಸ್ಯ ಕಾರ್ಯದರ್ಶಿಗಳು,

ತಾಲೂಕು ಕಾನೂನು ಸೇವೆಗಳ ಸಮಿತಿ,

ನ್ಯಾಯಾಲಯ ಸಂಕೀರ್ಣ, ಲಕ್ಷ್ಮೇಶ್ವರ,

ಗದಗ ಜಿಲ್ಲೆ – 582116.

ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅಧಿಕೃತ ಲಿಂಕ್ ಅಥವಾ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ನಿಗದಿತ ಸರಿಯಾದ ಮಾಹಿತಿ ತುಂಬಿರಿ.
  • ಅಧಿಸೂಚನೆಯಲ್ಲಿ ಸೂಚಿಸಿದ್ದರೆ ಮಾತ್ರ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನೋಂದಾಯಿತ ಅಂಚೆ (Registered Post) ಅಥವಾ ಸ್ಪೀಡ್ ಪೋಸ್ಟ್ ಮೂಲಕ ಮೇಲಿನ ವಿಳಾಸಕ್ಕೆ ಫೆಬ್ರವರಿ 21 ರ ಒಳಗಾಗಿ ತಲುಪಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್