Recruitment 2022: ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ಪ್ರಾರಂಭವಾಗುತ್ತಿದೆ. ಸಿಐಎಸ್‌ಎಫ್‌ನಲ್ಲಿ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದರೆ, ಕೇಂದ್ರೀಯ ವಿದ್ಯಾಲಯದ ವಿವಿಧ ಪ್ರದೇಶಗಳ ಶಾಲೆಗಳಲ್ಲಿ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಇದಲ್ಲದೆ ಇನ್ನೂ ಕೆಲವು ನೇಮಕಾತಿಗಳ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ವಿಶೇಷವೆಂದರೆ 10, 12ನೇ ತರಗತಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದು. ಹಾಗಿದ್ರೆ ಎಲ್ಲೆಲ್ಲಿ ಉದ್ಯೋಗಾವಕಾಶಗಳಿವೆ ನೋಡೋಣ..
CISF Recruitment 2022:
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 30 ಮಾರ್ಚ್ 2022 ರೊಳಗೆ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
India Post Recruitment 2022:
ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ನೇಮಕಾತಿಗಾಗಿ 10 ನೇ ಪಾಸ್ ಆದ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಅಧಿಕೃತ ವೆಬ್‌ಸೈಟ್ indiapost.gov.in ನಲ್ಲಿ ನೀಡಲಾದ ವಿವರಗಳ ಪ್ರಕಾರ, ಮೇ 17, 2022 ರವರೆಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
Patna High Court Recruitment 2022:
ಪಾಟ್ನಾ ಹೈಕೋರ್ಟ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. 29 ಮಾರ್ಚ್ 2022 ರವರೆಗೆ ಅಧಿಕೃತ ವೆಬ್‌ಸೈಟ್ patnahighcourt.gov.in ಗೆ ಭೇಟಿ ನೀಡುವ ಮೂಲಕ ಪೋಸ್ಟ್‌ಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
KV Delhi Region Bharti 2022:
ಕೇಂದ್ರೀಯ ವಿದ್ಯಾಲಯ ದೆಹಲಿ ಪ್ರದೇಶದ ಶಾಲೆಗಳಲ್ಲಿ PGT, TGT, ಪ್ರಾಥಮಿಕ ಶಿಕ್ಷಕರು, ವೈದ್ಯರು, ನರ್ಸ್, ಸಲಹೆಗಾರರು ಸೇರಿದಂತೆ ಹಲವು ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಎದುರು ನೋಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 28 ರಿಂದ 30 ರವರೆಗೆ ಈ ನೇಮಕಾತಿಗಾಗಿ ಣೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?