Metro Rail Jobs 2022: ಮೆಟ್ರೋ ನೇಮಕಾತಿ: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Sep 28, 2022 | 3:18 PM

Metro Rail Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ boat-srp.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Metro Rail Jobs 2022: ಮೆಟ್ರೋ ನೇಮಕಾತಿ: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
kmrl
Follow us on

Metro Rail Jobs 2022: ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (KMRL) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ boat-srp.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತೆ, ವೇತನ, ಪ್ರಮುಖ ದಿನಾಂಕ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಆರ್ಕಿಟೆಕ್ಚರಲ್ ಅಸಿಸ್ಟೆಂಟ್: 2 ಹುದ್ದೆಗಳು
  • ಎಲೆಕ್ಟ್ರಿಕಲ್ ಎಂಜಿನಿಯರಿಂಗ್: 7 ಹುದ್ದೆಗಳು
  • ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ: 2 ಹುದ್ದೆಗಳು
  • ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ: 1 ಹುದ್ದೆ
  • ಸಿವಿಲ್ ಎಂಜಿನಿಯರಿಂಗ್: 14 ಹುದ್ದೆಗಳು
  • ಕಂಪ್ಯೂಟರ್ ಹಾರ್ಡ್ವೇರ್ ನಿರ್ವಹಣೆ: 2 ಹುದ್ದೆಗಳು
  • ಸುರಕ್ಷತೆ ಮತ್ತು ಅಗ್ನಿಶಾಮಕ ಇಂಜಿನಿಯರಿಂಗ್: 2 ಹುದ್ದೆಗಳು
  • ಹೆಚ್​ಆರ್​-ಅಡ್ಮಿನ್ (B.Com/BA ಇಂಗ್ಲೀಷ್): 5 ಹುದ್ದೆಗಳು

ವಿದ್ಯಾರ್ಹತೆ:

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
  • ಪದವೀಧರ ಅಪ್ರೆಂಟಿಸ್ (BE/B.Tech)- ಅಭ್ಯರ್ಥಿಗಳು ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಮೂರು/ನಾಲ್ಕು ವರ್ಷಗಳ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.
  • ತಾಂತ್ರಿಕ ಅಪ್ರೆಂಟಿಸ್ – ಸಂಬಂಧಿತ ಟ್ರೇಡ್‌ನಲ್ಲಿ ಮೂರು ವರ್ಷಗಳ ಪ್ರಥಮ ದರ್ಜೆ ಡಿಪ್ಲೊಮಾ ಮಾಡಿರಬೇಕು.
  • ತಾಂತ್ರಿಕೇತರ ಪದವೀಧರ ಅಪ್ರೆಂಟಿಸ್- B.Com/ BA ಇಂಗ್ಲಿಷ್ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಪದವೀಧರ ಅಭ್ಯರ್ಥಿಗಳಿಗೆ 9 ಸಾವಿರ ಹಾಗೂ ಇತರೆ ಅಭ್ಯರ್ಥಿಗಳಿಗೆ 8 ಸಾವಿರ ರೂ. ವೇತನ ನೀಡಲಿದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 14, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.