LIC HFL Recruitment 2022: LIC ನೇಮಕಾತಿ: ತಿಂಗಳ ವೇತನ 53 ಸಾವಿರ ರೂ.
LIC HFL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC HFL ನ ಅಧಿಕೃತ ವೆಬ್‌ಸೈಟ್ lichousing.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
LIC HFL Recruitment 2022: ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು LIC HFL ನ ಅಧಿಕೃತ ವೆಬ್‌ಸೈಟ್ lichousing.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 80
ಅರ್ಹತಾ ಮಾನದಂಡಗಳು:
ಇದನ್ನೂ ಓದಿ
- ಸಹಾಯಕ ಹುದ್ದೆ – ಅಭ್ಯರ್ಥಿಯು ಕನಿಷ್ಠ 55% ಅಂಕಗಳೊಂದಿಗೆ ಪದವೀಧರರಾಗಿರಬೇಕು.
- ಸಹಾಯಕ ವ್ಯವಸ್ಥಾಪಕ ಹುದ್ದೆ- 50% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಯಾವುದೇ
- ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು. ಅಲ್ಲದೆ ಮಾರ್ಕೆಟಿಂಗ್/ಫೈನಾನ್ಸ್‌ನಲ್ಲಿ ಎಂಬಿಎ ಹೊಂದಿರಬೇಕು.
ಅರ್ಜಿ ಶುಲ್ಕ:
- ಸಹಾಯಕ ಹುದ್ದೆ – ರೂ.800/-
- ಸಹಾಯಕ ವ್ಯವಸ್ಥಾಪಕ ಹುದ್ದೆ-ರೂ.800/-
ತಿಂಗಳ ವೇತನ:
- ಸಹಾಯಕ- ಆರಂಭಿಕ ಮೂಲ ವೇತನ ರೂ.22,730/-
- ಸಹಾಯಕ ವ್ಯವಸ್ಥಾಪಕರು- – ಆರಂಭಿಕ ಮೂಲ ವೇತನ ರೂ.53,620/-
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ, ಸಂದರ್ಶನ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 25, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.