LIC Recruitment 2023: ಎಲ್​ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ

| Updated By: ಝಾಹಿರ್ ಯೂಸುಫ್

Updated on: Jan 18, 2023 | 3:08 PM

LIC Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್​ಸೈಟ್ ibpsonline.ibps.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

LIC Recruitment 2023: ಎಲ್​ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ
LIC Recruitment 2023
Follow us on

LIC Recruitment 2023: ಭಾರತೀಯ ಜೀವ ವಿಮಾ ನಿಗಮ (LIC) ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 300 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್​ಸೈಟ್ ibpsonline.ibps.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಸಹಾಯಕ ಆಡಳಿತಾಧಿಕಾರಿ- 300 ಹುದ್ದೆಗಳು

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 21 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 700 ರೂ.
  • SC/ST/PWD ಅಭ್ಯರ್ಥಿಗಳಿಗೆ- 85 ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಪ್ರಿಲಿಮಿನರಿ ಟೆಸ್ಟ್ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023
  • ಪ್ರಿಲಿಮಿನರಿ ಟೆಸ್ಟ್ ದಿನಾಂಕ​- ಫೆಬ್ರವರಿ 17, 2023
  • ಮುಖ್ಯ ಪರೀಕ್ಷೆ ದಿನಾಂಕ- ಮಾರ್ಚ್​ 18, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

 

Published On - 7:15 am, Wed, 18 January 23