LIC Recruitment 2023: ಎಲ್​ಐಸಿಯ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ

LIC Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

LIC Recruitment 2023: ಎಲ್​ಐಸಿಯ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ
LIC Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 26, 2023 | 2:27 PM

LIC Recruitment 2023: ಭಾರತೀಯ ಜೀವ ವಿಮಾ ನಿಗಮ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

LIC ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್- 9394 ಹುದ್ದೆಗಳು

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಅಥವಾ ಮುಂಬೈನ ಇನ್ಶುರೆನ್ಸ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಫೆಲೋಶಿಪ್ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 1ನೇ ಜನವರಿ 2023 ಕ್ಕೆ 21 ವರ್ಷಗಳಿಗಿಂತ ಕಡಿಮೆಯಿರಬಾರದು. ಹಾಗೆಯೇ 30 ವರ್ಷವನ್ನು ದಾಟಿರಬಾರದು. ಅಂದರೆ ಅಭ್ಯರ್ಥಿಗಳು 2ನೇ ಜನವರಿ 1993 ಕ್ಕಿಂತ ಮೊದಲು ಮತ್ತು 1ನೇ ಜನವರಿ 2002 ಕ್ಕಿಂತ ನಂತರ ಜನಿಸಬಾರದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್​ಸಿ-ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 750 ರೂ.
  • ಎಸ್​ಸಿ-ಎಸ್​ಟಿ ಅಭ್ಯರ್ಥಿಗಳಿಗೆ- 100 ರೂ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Also Read: SJVN Limited Recruitment 2023: ಜಲ ವಿದ್ಯುತ್ ನಿಗಮದ ನೇಮಕಾತಿ: ತಿಂಗಳ ಸಂಬಳ 45 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 10, 2023
  • ಪೂರ್ವಭಾವಿ ಪರೀಕ್ಷೆಯ ದಿನಾಂಕ- ಮಾರ್ಚ್ 12, 2023
  • ಮುಖ್ಯ ಪರೀಕ್ಷೆಯ ದಿನಾಂಕ- ಏಪ್ರಿಲ್ 8, 2023
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್