ಬೆಂಗಳೂರು: ನಿರುದ್ಯೋಗಿಗಳಿಗೆ ಸುಲಭವಾಗಿ ಉದ್ಯೋಗ ಸಿಗುವಂತೆ ಮಾಡುವ ಉದ್ದೇಶದಿಂದ ನಗರದ ಮಲ್ಲೇಶ್ವರಂನಲ್ಲಿ ನಾಳೆ (ಫೆ 11) ನೇರ ಸಂದರ್ಶನ ಪೂರ್ವ ತರಬೇತಿ ಮತ್ತು ಉದ್ಯೋಗ ಮೇಳವನ್ನು (Malleshwaram Job Fair 2023) ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಈ ಉದ್ಯೋಗ ಮೇಳ ಆಯೋಜಿಸಿದೆ. ಸ್ಥಳ: ಸರ್ಕಾರಿ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜು ಆವರಣ, 18ನೇ ಕ್ರಾಸ್, ಮಲ್ಲೇಶ್ವರ, ಬೆಂಗಳೂರು.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತು ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://skillconnect.kaushalkar.com/candidatereg ಲಿಂಕ್ ಬಳಸಿ ನೋಂದಣಿ ಮಾಡಿಕೊಳ್ಳಬಹುದು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಸ್ವ ವಿವರದ ಪ್ರತಿಗಳನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 99649 07444, 81050 20115, 91083 47465 ಸಂಪರ್ಕಿಸಬಹುದು.
ಇದನ್ನೂ ಓದಿ: RRB Recruitment 2023: PUC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ: ವೇತನ 36 ಸಾವಿರ ರೂ.
ಉದ್ಯೊಗಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ