
ಮಂಡ್ಯ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಅದರಲ್ಲೂ ವಿಶೇಷವಾಗಿ ಮಂಡ್ಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಮಂಡ್ಯ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಸಿಎ , ಬಿಇ, ಎಂಸಿಎ ಪೂರ್ಣಗೊಳಿಸಿರಬೇಕು.
ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಸೆಪ್ಟೆಂಬರ್ 30ರಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ವಯಸ್ಸಿನವರಾಗಿರಬೇಕು.
ಇದನ್ನೂ ಓದಿ: ರೈಲ್ವೆಯಲ್ಲಿ 8500 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ