AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Jangid: ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಕೋಟಿ ಕೋಟಿ ಸಂಬಳದ ಕೆಲಸ ತೊರೆದ ವ್ಯಕ್ತಿ

ಅಮೆಜಾನ್‌ನಲ್ಲಿ ಉನ್ನತ ಹುದ್ದೆಯಲ್ಲಿದ್ದ ಅನಿಲ್ ಜಾಂಗಿಡ್ ಕೋಟ್ಯಾಂತರ ರೂಪಾಯಿ ವೇತನವನ್ನು ತ್ಯಜಿಸಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಅವರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುರಕ್ಷಿತ ಉದ್ಯೋಗ ಮತ್ತು ಹೆಚ್ಚಿನ ಸಂಬಳವನ್ನು ಬಿಟ್ಟು ತಮ್ಮ ಹವ್ಯಾಸವನ್ನು ವೃತ್ತಿಯನ್ನಾಗಿ ಮಾಡಿಕೊಂಡ ಅನಿಲ್ ಅವರ ಕಥೆ ಸಾಕಷ್ಟು ಜನರಿಗೆ ಪ್ರೇರಣೆಯಾಗಿದೆ.

Anil Jangid: ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು  ಕೋಟಿ ಕೋಟಿ ಸಂಬಳದ ಕೆಲಸ ತೊರೆದ ವ್ಯಕ್ತಿ
Anil Jangid
ಅಕ್ಷತಾ ವರ್ಕಾಡಿ
|

Updated on:May 16, 2025 | 12:15 PM

Share

ಪ್ರತಿಯೊಬ್ಬರೂ ಕೈತುಂಬಾ ಸಂಬಳ ಸಿಗುವ ಕೆಲಸ ಬೇಕು ಎಂದು ಹಂಬಲಿಸ್ತಾರೆ. ಅದಕ್ಕಾಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಕೆಲಸ ಪಡೆಯಲು ಸಾಕಷ್ಟು ಹರಸಾಹಸ ಮಾಡುವುದುಂಟು. ಆದರೆ ಇಲ್ಲೊಬ್ಬ ವ್ಯಕ್ತಿ ತಿಂಗಳಿಗೆ ಕೋಟಿ ಕೋಟಿ ಸಂಬಳ ಬರುತ್ತಿದ್ದ ಕಾರ್ಪೋರೇಟ್ ಕೆಲಸ ತೊರೆದು ಸಂಗೀತ ಕ್ಷೇತ್ರದೆಡೆಗೆ ಮುಖ ಮಾಡಿದ್ದಾರೆ. ಸದ್ಯ ಈ ಕುರಿತ ಪೋಸ್ಟ್​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಅಮೆಜಾನ್‌ನಲ್ಲಿ ಮಾಜಿ ಉತ್ಪನ್ನ ವ್ಯವಸ್ಥಾಪಕ ಮತ್ತು ಅಹಮದಾಬಾದ್‌ನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಹಳೆಯ ವಿದ್ಯಾರ್ಥಿ ಅನಿಲ್ ಜಾಂಗಿಡ್(Anil Jangid) ಸದ್ಯ ಎಲ್ಲೆಡೆ ಸುದ್ದಿಯಲ್ಲಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಅನಿಲ್​​ ಸಂಗೀತ ಕ್ಷೇತ್ರದಲ್ಲಿ ವೃತ್ತಿಜೀವನ ಮುಂದುವರಿಸಲು ತನಗೆ ಸಿಗುತ್ತಿದ್ದ ಆರು ಅಂಕಿಗಳ ಸಂಬಳ ಮತ್ತು ಸುರಕ್ಷಿತ ಕಾರ್ಪೊರೇಟ್ ಕೆಲಸವನ್ನ ತ್ಯಜಿಸಿದ್ದಾರೆ.

ಅಮೆಜಾನ್‌ನಲ್ಲಿ ಉತ್ಪನ್ನ ವ್ಯವಸ್ಥಾಪಕನಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅನಿಲ್​​ ತಿಂಗಳಿಗೆ ಕೋಟ್ಯಾಂತರ ರೂಪಾಯಿ ವೇತನವನ್ನು ಪಡೆಯುತ್ತಿದ್ದರು. ಇನ್ನೇನು ಜೀವನ ಸೆಟಲ್​​​ ಅನ್ನುವಷ್ಟರಲ್ಲಿ ಅನಿಲ್​​ ಕೆಲಸ ತೊರೆದಿದ್ದು, ಸಾಕಷ್ಟು ಜನರಿಗೆ ಶಾಕ್​​ ನೀಡಿದೆ. ಈ ಕುರಿತು ಅವರ ಸಹೋದ್ಯೋಗಿ ಶ್ರವಣ್ ಟಿಕೂ ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ.

Download

ಇದನ್ನೂ ಓದಿ: ಹೆರಿಗೆಯಾಗಿ 2 ವಾರವಾಗಿದೆಯಷ್ಟೇ, UPSC ಪರೀಕ್ಷೆ ಬರೆದು 45ನೇ ರ‍್ಯಾಂಕ್ ಪಡೆದ ಮಹಿಳೆ

“ಇದು ನನ್ನ ಆತ್ಮೀಯ ಗೆಳೆಯ ಅನಿಲ್ ಜಂಗಿಡ್ ಅವರ ಕಥೆ. ಕೆಲವು ವರ್ಷಗಳ ಹಿಂದೆ ಅವರು ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ನಾನು ಅವರನ್ನು ಭೇಟಿಯಾದೆ. ಅವರದ್ದು ಪ್ರತಿಷ್ಠಿತ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯನ್ನು ಹೊಂದಿದ್ದು ಕೈ ತುಂಬಾ ಸಂಬಳವನ್ನೂ ಪಡೆಯುತ್ತಿದ್ದರು. ಆದರೆ ಅವೆಲ್ಲವನ್ನೂ ತೊರೆದು ಸಂಗೀತದಲ್ಲಿ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. ನಾವೆಲ್ಲರೂ ಕಲಾವಿದರು ಅಥವಾ ಸ್ವತಃ ತಮ್ಮದೇ ಉದ್ಯಮ ಪ್ರಾರಂಭಿಸುವ ಕನಸು ಕಾಣುತ್ತೇವೆ, ಆದರೆ ಅದನ್ನು ನನಸು ಮಾಡುವುದು ಅಷ್ಟು ಸುಲಭವಲ್ಲ. ಆದರೆ ಅನಿಲ್ ಎಲ್ಲವನ್ನು ತೊರೆದು ಇಂದು ತನ್ನ ಕನಸನ್ನು ನನಸು ಮಾಡಿಕೊಂಡಿದ್ದಾರೆ” ಎಂದು ಟಿಕು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಿಲ್​​ ಅವರ ಚೊಚ್ಚಲ ಹಾಡು “#SunLoZara” ಬಿಡುಗಡೆಯನ್ನು ಒಳಗೊಂಡಿರುವ ಪೋಸ್ಟ್ ವೈರಲ್ ಆಗಿದೆ. ಲಿಂಕ್ಡ್‌ಇನ್ ಪೋಸ್ಟ್ ಎಲ್ಲೆಡೆ ಗಮನ ಸೆಳೆದಿದ್ದು, ಅನೇಕ ಬಳಕೆದಾರರು ಜಂಗಿಡ್ ಅವರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Fri, 16 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ