AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika G Nair: ಹೆರಿಗೆಯಾಗಿ 2 ವಾರವಾಗಿದೆಯಷ್ಟೇ, UPSC ಪರೀಕ್ಷೆ ಬರೆದು 45ನೇ ರ‍್ಯಾಂಕ್ ಪಡೆದ ಮಹಿಳೆ

ಕೇರಳದ ಆಲಪ್ಪುಳ ಜಿಲ್ಲೆಯ ಮಾಳವಿಕಾಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೆರಿಗೆಯಾಗಿತ್ತು. ಆದರೆ ಹೆರಿಗೆಯಾದ ಕೇವಲ 17 ದಿನಗಳ ನಂತರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, 45 ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಗರ್ಭಧಾರಣೆ ಮತ್ತು ಹೆರಿಗೆಯ ಸವಾಲುಗಳ ಹೊರತಾಗಿಯೂ ತಮ್ಮ ಕನಸನ್ನು ಸಾಧಿಸುವ ಮೂಲಕ ಸಾಕಷ್ಟು ಮಹಿಳೆಯರಿಗೆ ಇವರು ಮಾದರಿಯಾಗಿದ್ದಾರೆ.

Malavika G Nair: ಹೆರಿಗೆಯಾಗಿ 2 ವಾರವಾಗಿದೆಯಷ್ಟೇ, UPSC ಪರೀಕ್ಷೆ ಬರೆದು 45ನೇ ರ‍್ಯಾಂಕ್ ಪಡೆದ ಮಹಿಳೆ
Meet Malavika G Nair
ಅಕ್ಷತಾ ವರ್ಕಾಡಿ
|

Updated on:Apr 25, 2025 | 12:59 PM

Share

ಬಾಣಂತನವೆಂಬುದು ಹೆಣ್ಣಿನ ಜೀವನದ ಬಹಳ ಸೂಕ್ಷ್ಮ ಘಟ್ಟ. ಈ ಸಮಯದಲ್ಲಿ ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶ್ರಾಂತಿ ಬೇಕಿರುತ್ತದೆ. ಮಗುವಿನ ಆರೋಗ್ಯದ ಚಿಂತೆ ಒಂದೆಡೆಯಾದರೆ ದೈಹಿಕವಾಗಿ ಆಗುವ ಬದಲಾವಣೆಗಳಿಗೆ ಒಗ್ಗಿಕೊಂಡು ಮಾನಸಿಕ ಸ್ಥಿತಿಯನ್ನೂ ಸಮತೋಲನದಲ್ಲಿರಿಸಿಕೊಳ್ಳುವ ಅನಿವಾರ್ಯತೆ ಇರುತ್ತದೆ. ಆದರೆ ಇಲ್ಲೊಬ್ಬಳು ಮಹಿಳೆ ಬಾಣಂತನದ ಸಮಯದಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುವ ಬದಲಾಗಿ ದೇಶದಲ್ಲೇ ತುಂಬಾ ಕಷ್ಟವಾದ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದಾಳೆ. ಈ ಮೂಲಕ ತನ್ನ ಆರನೇ ಪ್ರಯತ್ನದಲ್ಲಿ ಐಎಎಸ್ ಅಧಿಕಾರಿಯಾಗುವ ಕನಸನ್ನು ನನಸು ಮಾಡಿಕೊಂಡಿದ್ದಾಳೆ.

ಮಂಗಳವಾರ ಪ್ರಕಟವಾದ 2024 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಟಾಪ್​​​ 50 ರ‍್ಯಾಂಕ್ ಪಡೆದವರಲ್ಲಿ ಸ್ಥಾನ ಪಡೆದ ಕೇರಳದ ಮೂವರು ನಾಗರಿಕ ಸೇವಾ ಅಭ್ಯರ್ಥಿಗಳಲ್ಲಿ ಒಬ್ಬರಾದ ಮಾಳವಿಕಾ ಜಿ ನಾಯರ್ ಸದ್ಯ ಎಲ್ಲೆಡೆ ಸುದ್ದಿಯಲ್ಲಿದ್ದಾರೆ. ಆಲಪ್ಪುಳ ಜಿಲ್ಲೆಯ ಚೆಂಗನ್ನೂರು ಮೂಲದ ಮಾಳವಿಕಾಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೆರಿಗೆಯಾಗಿತ್ತು. ಆದರೆ ಹೆರಿಗೆಯಾದ ಕೇವಲ 17 ದಿನಗಳ ನಂತರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, 45 ನೇ ರ‍್ಯಾಂಕ್ ಗಳಿಸುವ ಮೂಲಕ ಸಾಕಷ್ಟು ಮಹಿಳೆಯರಿಗೆ ಮಾದರಿಯಾಗಿದ್ದಾರೆ.

“ನನ್ನ ಹೆಸರು ರ‍್ಯಾಂಕ್ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ, ದೇವರಿಗೆ ಧನ್ಯವಾದಗಳು. ಐಎಎಸ್‌ಗೆ ಪ್ರವೇಶಿಸಲು ಇದು ನನ್ನ ಕೊನೆಯ ಪ್ರಯತ್ನವಾಗಿತ್ತು. ಕಳೆದ ವರ್ಷ ಪ್ರಿಲಿಮ್ಸ್ ಪರೀಕ್ಷೆ ಬರೆಯುವಾಗ ನಾನು ಗರ್ಭಿಣಿಯಾಗಿದ್ದೆ. ಆರೋಗ್ಯದ ವಿಷಯದಲ್ಲಿ ಸವಾಲುಗಳಿದ್ದವು. ನನ್ನ ಮಗ ಸೆಪ್ಟೆಂಬರ್ 3 ರಂದು ಜನಿಸಿದನು ಮತ್ತು ನಾನು ಸೆಪ್ಟೆಂಬರ್ 20 ರಂದು ಮುಖ್ಯ ಪರೀಕ್ಷೆ ಬರೆದೆ. ನನ್ನ ಕುಟುಂಬವು ನನಗೆ ನೀಡಿದ ಬೆಂಬಲದಿಂದಾಗಿ ನಾನು ಪರೀಕ್ಷೆಯನ್ನು ಬರೆಯಲು ಸಾಧ್ಯವಾಯಿತು,” ಎಂದು ಮಾಳವಿಕಾ ಮಾಧ್ಯಮದ ಮುಂದೆ ಹೇಳಿದ್ದಾರೆ.

ಇದನ್ನೂ ಓದಿ: ಕಸದ ಬುಟ್ಟಿಯಲ್ಲಿ ಸಿಕ್ಕಿದ್ದ ಅಂಧ ಮಗು ಇಂದು ಅಸಿಸ್ಟಂಟ್ ಕಲೆಕ್ಟರ್

45 ನೇ ರ‍್ಯಾಂಕ್ ಗಳಿಸಿರುವ ನಾಯರ್ ಪ್ರಸ್ತುತ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯಾಗಿದ್ದಾರೆ. ಡೆಪ್ಯೂಟಿ ಕಮಿಷನರ್ ಶ್ರೇಣಿಯ ಅಧಿಕಾರಿಯಾಗಿರುವ ನಾಯರ್ ಪ್ರಸ್ತುತ ಮಕ್ಕಳ ಆರೈಕೆ ರಜೆಯಲ್ಲಿದ್ದಾರೆ. ಅವರು ಈ ಹಿಂದೆ ಎರಡು ಬಾರಿ ಯುಪಿಎಸ್‌ಸಿ ರ‍್ಯಾಂಕ್ ಪಟ್ಟಿಯನ್ನು ಪಾಸು ಮಾಡಿದ್ದಾರೆ ಮತ್ತು 2022 ರ ಪರೀಕ್ಷೆಯಲ್ಲಿ 172 ನೇ ರ‍್ಯಾಂಕ್ ಗಳಿಸಿದಾಗ ಅವರಿಗೆ ಐಆರ್‌ಎಸ್ ಹಂಚಿಕೆಯಾಗಿತ್ತು. ಅವರ ಪತಿ ನಂದಗೋಪನ್ ಎಂ, 2023 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ ತರಬೇತಿದಾರರಾಗಿದ್ದು, ಪ್ರಸ್ತುತ ಮಲಪ್ಪುರಂ ಜಿಲ್ಲೆಯ ಮಂಜೇರಿ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Fri, 25 April 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ