MESCOM Recruitment 2023: ಪದವೀಧರರಿಗೆ ಮೆಸ್ಕಾಂನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Aug 19, 2023 | 2:25 PM

MESCOM Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಮೆಸ್ಕಾಂನ ಅಧಿಕೃತ ವೆಬ್​​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

MESCOM Recruitment 2023: ಪದವೀಧರರಿಗೆ ಮೆಸ್ಕಾಂನಲ್ಲಿದೆ ಉದ್ಯೋಗಾವಕಾಶ
MESCOM Recruitment 2023
Follow us on

MESCOM Recruitment 2023: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (MESCOM) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಮೆಸ್ಕಾಂನ ಅಧಿಕೃತ ವೆಬ್​​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಮೆಸ್ಕಾಂ )
  • ಹುದ್ದೆಗಳ ಸಂಖ್ಯೆ: 200
  • ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಅಪ್ರೆಂಟಿಸ್

ಹುದ್ದೆಗಳ ಸಂಖ್ಯಾವರು ವಿವರಗಳು:

  • ಪದವಿ ಅಪ್ರೆಂಟಿಸ್‌ಗಳು- 70 ಹುದ್ದೆಗಳು
  • ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್- 65 ಹುದ್ದೆಗಳು
  • ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- 65 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪದವಿ ಅಪ್ರೆಂಟಿಸ್‌ಗಳು- ಬಿಇ ಅಥವಾ ಬಿ.ಟೆಕ್ ಮಾಡಿರಬೇಕು.
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು- ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- BA, B.Sc, B.Com, BBA, BCA ಪೂರ್ಣಗೊಳಿಸಿದವರು ಅರ್ಜಿ ಸಲ್ಲಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಆಧಾರ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ಸ್ಟೈಪೆಂಡ್:

  • ಪದವಿ ಅಪ್ರೆಂಟಿಸ್‌ಗಳು- ರೂ.9000/-
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು- ರೂ.8000/-
  • ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- ರೂ.9000/-

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಸೆಪ್ಟೆಂಬರ್-2023
  • NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: 06-ಸೆಪ್ಟೆಂಬರ್-2023
  • ಶಾರ್ಟ್‌ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: 19-ಸೆಪ್ಟೆಂಬರ್-2023
  • MESCOM ನಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: ಸೆಪ್ಟೆಂಬರ್ 26 ಮತ್ತು 27 ( ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ)

ಇದನ್ನೂ ಓದಿ: ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: mescom.karnataka.gov.in