Indian Army Recruitment 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿದೆ ಉದ್ಯೋಗಾವಕಾಶ
Indian Army Recruitment 2022: ಈ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕೆಲಸ ಮಾಡುವ ಜ್ಞಾನವನ್ನು ಹೊಂದಿರಬೇಕು.
Indian Army Recruitment 2022: ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಅಡಿಯಲ್ಲಿ, ಜಲಂಧರ್ ಕ್ಯಾಂಟ್‌ನಲ್ಲಿ ನಾಗರಿಕ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 27 ರೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಬಳಿಕ ಅಂಚೆಯ ಮೂಲಕ ಕಳುಹಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಕ್ಷೌರಿಕ- 02 ಹುದ್ದೆಗಳು ಚೌಕಿದಾರ್- 11 ಹುದ್ದೆಗಳು ಕುಕ್- 04 ಹುದ್ದೆಗಳು ಸಹಾಯಕ- 01 ಹುದ್ದೆ ಟ್ರೇಡ್ಸ್ಮನ್- 08 ಹುದ್ದೆಗಳು ವಾಷರ್ಮನ್- 12 ಹುದ್ದೆಗಳು ಸಫೈವಾಲ- 27 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕೆಲಸ ಮಾಡುವ ಜ್ಞಾನವನ್ನು ಹೊಂದಿರಬೇಕು. ನೇಮಕಾತಿ ಜಾಹೀರಾತಿನಲ್ಲಿ ಹೆಚ್ಚಿನ ಶೈಕ್ಷಣಿಕ ಅರ್ಹತೆಯ ವಿವರಗಳನ್ನು ನೀಡಲಾಗಿದೆ.
ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 25 ವರ್ಷಗಳ ಅಭ್ಯರ್ಥಿಗಳು ಜಲಂಧರ್ ಕ್ಯಾಂಟ್‌ನಲ್ಲಿ ಸಿವಿಲಿಯನ್ ಪೋಸ್ಟ್‌ಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 6, 2022
ಅರ್ಜಿ ಡೌನ್‌ಲೋಡ್ ಮಾಡುವುದು ಹೇಗೆ? ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: “The Commandant, Military Hospital Jalandhar Cantt Pin Code No 144005 (Punjab)“
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.