Ministry of Defence Recruitment 2022: ರಕ್ಷಣಾ ಸಚಿವಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Ministry of Defence Recruitment 2022: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ).
Ministry of Defence Recruitment 2022: ರಕ್ಷಣಾ ಸಚಿವಾಲಯದ ಹಲವು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (Ministry of Defence Recruitment 2022) ರಕ್ಷಣಾ ಸಚಿವಾಲಯದ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಫೆಬ್ರವರಿ 2022 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು:
ಒಟ್ಟು ಹುದ್ದೆಗಳು – 13
ಟ್ಯಾಲಿ ಕ್ಲರ್ಕ್ – 2 ಹುದ್ದೆಗಳು ಕುಕ್ – 3 ಹುದ್ದೆಗಳು MTS (ಕಾವಲುಗಾರ) – 4 ಹುದ್ದೆಗಳು MTS (ಸಫಾಯಿವಾಲಾ) – 3 ಹುದ್ದೆಗಳು ಹೌಸ್ ಕೀಪರ್- 1 ಹುದ್ದೆ
Ministry of Defence Recruitment 2022ರ ಅರ್ಹತಾ ಮಾನದಂಡಗಳು: ಟ್ಯಾಲಿ ಕ್ಲರ್ಕ್- ಅಭ್ಯರ್ಥಿಗಳು 12th/HSC ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಡುಗೆಯವರು – 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. MTS (ಕಾವಲುಗಾರ) – ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹೌಸ್‌ಕೀಪರ್ – 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Ministry of Defence Recruitment 2022ರ ವಯೋಮಿತಿ: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ).
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26 ಫೆಬ್ರವರಿ 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.