AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Alert: ಹಣಕಾಸು ಸಚಿವಾಲಯದಲ್ಲಿ 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

Ministry of Finance 2022: ಹಣಕಾಸು ಸಚಿವಾಲಯವು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 590 ಹುದ್ದೆಗಳು ಖಾಲಿ ಇದ್ದು, ಈ ಕುರಿತ ಮಾಹಿತಿ ಇಲ್ಲಿದೆ.

Job Alert: ಹಣಕಾಸು ಸಚಿವಾಲಯದಲ್ಲಿ 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 23, 2022 | 3:22 PM

Share

ಹಣಕಾಸು ಸಚಿವಾಲಯವು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ (Assistant Accounts Officer) ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸುವ ಮೂಲಕ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸುದ್ದಿಗಳಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 45 ದಿನಗಳ ಒಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 590 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡೆಪ್ಯುಟೇಶನ್ ಅವಧಿಯು ಆರಂಭದಲ್ಲಿ 3 ವರ್ಷಗಳವರೆಗೆ ಇರುತ್ತದೆ. ಸಾರ್ವಜನಿಕ ಸೇವೆಗಳ ಅಗತ್ಯತೆಗಳಲ್ಲಿ ಅಗತ್ಯವಿರುವಂತೆ ಅದನ್ನು ವಿಸ್ತರಿಸಬಹುದು ಅಥವಾ ಮೊಟಕುಗೊಳಿಸಬಹುದು. ಬೆಂಗಳೂರು, ಮಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧ ನಗರಗಳಲ್ಲಿ ಹುದ್ದೆಗಳು ಖಾಲಿ ಇವೆ. ವೇತನ ಶ್ರೇಣಿ 7ನೇ ಸಿಪಿಸಿ ಅನ್ವಯ 8 ಅಥವಾ 9ನೇ ಹಂತದಲ್ಲಿರಲಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳ ಕುರಿತು ಮಾಹಿತಿ ಇಲ್ಲಿದೆ.

ಅರ್ಹತೆಯ ಮಾನದಂಡ: ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು AAO (Civil)/ SAS ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಎಸ್‌ಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು- ತಮ್ಮ ಬಡ್ತಿಗಾಗಿ ಕಾಯುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿಯ ಸ್ವೀಕೃತಿಯ ಅಂತಿಮ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ ವಯಸ್ಸಿನ ಮಿತಿಯು 56 ವರ್ಷಕ್ಕಿಂತ ಕಡಿಮೆ ಇರಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಕಳುಹಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಇಲ್ಲಿಗೆ ಕಳುಹಿಸಬೇಕು: Senior Accounts Officer (HR-3), O/o Controller General of Accounts, Department of Expenditure, Ministry of Finance, Room No 210, 2nd Floor, Mahalekha Niyantrak Bhawan, Block GPO Complex, INA, Delhi-110023

ಇಮೇಲ್ ವಿಳಾಸ: groupbsec-cga@gov.in

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ- http://davp.nic.in/WriteReadData/ADS/eng_15101_2_2122b.pdf

ಇದನ್ನೂ ಓದಿ:

Job Alert: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳು: ಕನ್ನಡ, ಕೊಂಕಣಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ