Ministry of WCD Internship 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಗೆ ಅರ್ಜಿ ಆಹ್ವಾನ , ಇಲ್ಲಿದೆ ಮಾಹಿತಿ

ನೀವು ಸರ್ಕಾರಿ ಇಂಟರ್ನ್‌ಶಿಪ್ ಮಾಡಲು ಬಯಸಿದರೆ, ನವದೆಹಲಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಇಂಟರ್ನ್‌ಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ಶ್ರೇಣಿ I ಅಲ್ಲದ ನಗರಗಳು ಮತ್ತು ಗ್ರಾಮೀಣ ಭಾಗಗಳ ವಿದ್ಯಾರ್ಥಿನಿಯರು, ಮಹಿಳಾ ಸಾಮಾಜಿಕ ಕಾರ್ಯಕರ್ತರು ಹಾಗೂ ಶಿಕ್ಷಕಿಯರು ಅರ್ಜಿ ಸಲ್ಲಿಸಬಹುದಾಗಿದೆ. 2025 ರ ಜನವರಿ 10 ರೊಳಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ wcd.intern.nic.in ಗೆ ಭೇಟಿ ನೀಡಿ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು.

Ministry of WCD Internship 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಗೆ ಅರ್ಜಿ ಆಹ್ವಾನ , ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 12, 2024 | 6:29 PM

ಭಾರತ ಸರ್ಕಾರದ ಸಚಿವಾಲಯದಲ್ಲಿ ಇಂಟರ್ನ್‌ಶಿಪ್ ಪಡೆಯಲು ಅವಕಾಶವಿದ್ದು ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಭಾರತದ ಶ್ರೇಣಿ I ಅಲ್ಲದ ನಗರಗಳು ಮತ್ತು ಗ್ರಾಮೀಣ ಭಾಗಗಳ ವಿದ್ಯಾರ್ಥಿನಿಯರು, ಮಹಿಳಾ ವಿದ್ವಾಂಸರು, ಮಹಿಳಾ ಸಾಮಾಜಿಕ ಕಾರ್ಯಕರ್ತರು ಹಾಗೂ ಶಿಕ್ಷಕಿಯರಿಂದ ಇಂಟರ್ನ್‌ಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಮೂಲಕ ಇಂಟರ್ನ್‌ಗಳ ಪ್ರತಿಭೆಯನ್ನು ಗುರುತಿಸುವುದು ಸಚಿವಾಲಯದ ಉದ್ದೇಶವಾಗಿದ್ದು ಇಂಟರ್ನ್‌ಗಳಿಗೆ ಸಚಿವಾಲಯದ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶ ಲಭಿಸಲಿದೆ. ಹೀಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಇಂಟರ್ನಶಿಪ್ ಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು

* ವಿದ್ಯಾರ್ಥಿನಿಯರು, ಮಹಿಳಾ ವಿದ್ವಾಂಸರು, ಮಹಿಳಾ ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕಿಯರು ಮಾತ್ರ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

* ಅಭ್ಯರ್ಥಿಯು ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಅಥವಾ ಶೈಕ್ಷಣಿಕೇತರ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರುವುದು ಅವಶ್ಯಕ.

ಆಯ್ಕೆ ಪ್ರಕ್ರಿಯೆ

* ಆಯ್ಕೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಇಂಟರ್ನ್‌ಗಳ ಆಯ್ಕೆಯನ್ನು ಮಾಡಲಾಗುತ್ತದೆ.

* ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯು ಇಂಟರ್ನ್‌ಶಿಪ್ ಪೋರ್ಟಲ್‌ನಲ್ಲಿ ಹೆಸರನ್ನು ಪ್ರಕಟಿಸಲಲಾಗುತ್ತದೆ.

* ಇಂಟರ್ನ್‌ಶಿಪ್ ಒಮ್ಮೆ ಆಯ್ಕೆಯಾದ ಅಭ್ಯರ್ಥಿಯು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಇತರೆ ಸೌಲಭ್ಯಗಳು

ಸಚಿವಾಲಯದಲ್ಲಿ ಇಂಟರ್ನ್‌ಶಿಪ್ ಪಡೆಯುವ ಪ್ರತಿಯೊಬ್ಬ ಇಂಟರ್ನ್‌ಗೆ ಪ್ರತಿ ತಿಂಗಳು 20 ಸಾವಿರ ರೂ.ನೀಡಲಾಗುತ್ತದೆ. ಇಂಟರ್ನ್‌ಶಿಪ್ ಪಡೆಯುವಲ್ಲಿ ಪ್ರಯಾಣದ ವೆಚ್ಚವನ್ನು ಸಹ ಸಚಿವಾಲಯವೇ ಭರಿಸುತ್ತದೆ. ಹಾಸ್ಟೆಲ್ ಸೌಲಭ್ಯಗಳು, ಲಾಜಿಸ್ಟಿಕ್ಸ್ ಬೆಂಬಲ ಹಾಗೂ ಇಂಟರ್ನೆಟ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅದಲ್ಲದೇ, ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಇಂಟರ್ನ್‌ಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕ

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 10, 2025

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ