MMRCL Recruitment 2022: ಮುಂಬೈ ಮೆಟ್ರೋದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

| Updated By: ಝಾಹಿರ್ ಯೂಸುಫ್

Updated on: Mar 19, 2022 | 7:35 PM

MMRCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MMRCL ನ ಅಧಿಕೃತ ವೆಬ್‌ಸೈಟ್ mmrcl.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

MMRCL Recruitment 2022: ಮುಂಬೈ ಮೆಟ್ರೋದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
MMRCL Recruitment 2022
Follow us on

MMRCL Recruitment 2022: ಮುಂಬೈ ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, MMRCL ಇಂಜಿನಿಯರಿಂಗ್ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MMRCL ನ ಅಧಿಕೃತ ವೆಬ್‌ಸೈಟ್ mmrcl.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಮಾರ್ಚ್ 9 ರಿಂದ ಶುರುವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15,2022. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

MMRCL Recruitment 2022: ಹುದ್ದೆಗಳ ವಿವರಗಳು:
ಸಹಾಯಕ ಜನರಲ್ ಮ್ಯಾನೇಜರ್- ಹುದ್ದೆಗಳು
ಸಹಾಯಕ ವ್ಯವಸ್ಥಾಪಕ- 2 ಹುದ್ದೆಗಳು
ಡೆಪ್ಯುಟಿ ಇಂಜಿನಿಯರ್- 2 ಹುದ್ದೆಗಳು
ಜೂನಿಯರ್ ಸೂಪರ್‌ವೈಸರ್- 1 ಹುದ್ದೆ
ಜೂನಿಯರ್ ಇಂಜಿನಿಯರ್- 16 ಹುದ್ದೆಗಳು
ಸಹಾಯಕ (IT)- 1 ಹುದ್ದೆ

MMRCL Recruitment 2022: ವಿದ್ಯಾರ್ಹತೆ:
ವಿವಿಧ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಜೊತೆಗೆ ಕೆಲವು ಕೆಲಸದ ಅನುಭವವನ್ನು ಸಹ ಕೋರಲಾಗಿದೆ. ಇದರ ವಿವರಗಳನ್ನು ನೇಮಕಾತಿ ಅಧಿಸೂಚನೆಯಲ್ಲಿ ನೋಡಬಹುದು.

MMRCL Recruitment 2022: ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ಸಂದರ್ಶನಕ್ಕೆ ಕರೆಯಲಾಗುತ್ತದೆ.

MMRCL Recruitment 2022: ಅರ್ಜಿ ಸಲ್ಲಿಸುವುದು ಎಲ್ಲಿ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಇತರ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
Deputy General Manager (HR)
Mumbai Metro Rail Corporation Limited
MMRCL –Line 3 Transit Office, E Block, Bandra Kurla Complex,
Bandra (East), Mumbai- 400051.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.