MOIL Recruitment 2022: ಸರ್ಕಾರಿ ಸ್ವಾಮ್ಯದ ಮ್ಯಾಂಗನೀಸ್ ಅದಿರು ಗಣಿಗಾರಿಕೆ ಕಂಪನಿ (MOIL)ಸಿಬ್ಬಂದಿ ವಿಭಾಗದಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ moil.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ – 4
ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 60% ಅಂಕಗಳೊಂದಿಗೆ ಲೇಬರ್ ವೆಲ್ಫೇರ್ ವಿಷಯದೊಂದಿಗೆ ಸೋಷಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ₹ 590 ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ವಯೋಮಿತಿ:
30 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಜೂನ್
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
_____________________________________________________________
ಪವರ್ ಗ್ರಿಡ್ ಕಾರ್ಪೊರೇಷನ್ನಲ್ಲಿದೆ ಉದ್ಯೋಗಾವಕಾಶ:
Powergrid Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ: 8
ಹುದ್ದೆಗಳ ವಿವರಗಳು: ಸಹಾಯಕ ಇಂಜಿನಿಯರ್ ಟ್ರೈನಿ ಹುದ್ದೆಗಳು
ವಯೋಮಿತಿ: ಅಭ್ಯರ್ಥಿಗಳು ಜೂನ್ 18, 2022 ರೊಳಗೆ 28 ವರ್ಷಗಳನ್ನು ಮೀರಬಾರದು.
ವಿದ್ಯಾರ್ಹತೆ: ಕನಿಷ್ಠ 60% ಅಂಕಗಳೊಂದಿಗೆ ಮೂರು ವರ್ಷಗಳ LLB ಅಥವಾ ಒಂದು ವರ್ಷದ ಇಂಟಿಗ್ರೇಟೆಡ್ ಲಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕ್ಲಾಟ್ 2022 ಪರೀಕ್ಷೆಯಲ್ಲಿ ಮಾನ್ಯವಾದ ಸ್ಕೋರ್ ಅನ್ನು ಸಹ ಹೊಂದಿರಬೇಕು.
ಆಯ್ಕೆ ವಿಧಾನ: CLAT 2022 ಸ್ಕೋರ್ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ: ಒಬಿಸಿ, ಇತರೆ ಅಭ್ಯರ್ಥಿಗಳು ರೂ. 500 ಪಾವತಿಸಬೇಕು. SC, ST, PWC ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 18, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:42 pm, Tue, 31 May 22