AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL Recruitment 2023: ಮೈಸೂರು ಸೇಲ್ಸ್​ ಲಿಮಿಟೆಡ್​ನ ಹುದ್ದೆಗಳಿಗೆ ಅರ್ಜಿ ಆಹ್ವಾನ

MSIL Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

MSIL Recruitment 2023: ಮೈಸೂರು ಸೇಲ್ಸ್​ ಲಿಮಿಟೆಡ್​ನ ಹುದ್ದೆಗಳಿಗೆ ಅರ್ಜಿ ಆಹ್ವಾನ
MSIL Recruitment
TV9 Web
| Edited By: |

Updated on: Jul 18, 2023 | 2:29 PM

Share

MSIL Recruitment 2023: ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 22 ಕೊನೆಯ ದಿನಾಂಕ ಎಂದು ತಿಳಿಸಲಾಗಿದ್ದು, ಇದೀಗ ಈ ತಿಂಗಳಾಂತ್ಯದವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕರು, ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆ​ನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL)
  • ಹುದ್ದೆಗಳ ಸಂಖ್ಯೆ: 72
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕರು, ಕ್ಲರ್ಕ್

ಹುದ್ದೆಗಳ ವಿಭಾಗ:

  • ಸಹಾಯಕ ವ್ಯವಸ್ಥಾಪಕರು- 23 ಹುದ್ದೆಗಳು
  • ಮಾರಾಟ ಮೇಲ್ವಿಚಾರಕ- 19 ಹುದ್ದೆಗಳು
  • ಸೇಲ್ಸ್ ಇಂಜಿನಿಯರ್- 4 ಹುದ್ದೆಗಳು
  • ಅಕೌಂಟ್ಸ್ ಕ್ಲರ್ಕ್- 6 ಹುದ್ದೆಗಳು
  • ಕ್ಲರ್ಕ್​- 14 ಹುದ್ದೆಗಳು
  • ಮಾರಾಟ ಪ್ರತಿನಿಧಿ- 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸಹಾಯಕ ವ್ಯವಸ್ಥಾಪಕರು- ಪದವಿ , M.Sc, MBA, ಸ್ನಾತಕೋತ್ತರ ಪದವಿ, CA ಅಥವಾ ICWA ಮಾಡಿರಬೇಕು.
  • ಮಾರಾಟ ಮೇಲ್ವಿಚಾರಕ- ಪದವೀಧರರಾಗಿರಬೇಕು.
  • ಸೇಲ್ಸ್ ಇಂಜಿನಿಯರ್- ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು.
  • ಅಕೌಂಟ್ಸ್ ಕ್ಲರ್ಕ್- ಬಿ.ಕಾಂ ಅಥವಾ ಬಿಬಿಎ ಮಾಡಿರಬೇಕು.
  • ಕ್ಲರ್ಕ್​- ಪದವೀಧರರಾಗಿರಬೇಕು.
  • ಮಾರಾಟ ಪ್ರತಿನಿಧಿ- ಪದವೀಧರರಾಗಿರಬೇಕು.

ವಯೋಮಿತಿ:

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 22-ಜುಲೈ-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಗಳಿಗೆ: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:

  • PWD & Ex-Servicemen ಅಭ್ಯರ್ಥಿಗಳು: ರೂ. 250/-
  • SC/ST ಮತ್ತು Cat-I ಅಭ್ಯರ್ಥಿಗಳು: ರೂ. 750/-
  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು: ರೂ. 1000/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಸಹಾಯಕ ವ್ಯವಸ್ಥಾಪಕರು- ರೂ.44200-80100/-
  • ಮಾರಾಟ ಮೇಲ್ವಿಚಾರಕ- ರೂ.35150-64250/-
  • ಸೇಲ್ಸ್ ಇಂಜಿನಿಯರ್- ರೂ.25200-50150/-
  • ಅಕೌಂಟ್ಸ್ ಕ್ಲರ್ಕ್- ರೂ.25200-50150/-
  • ಕ್ಲರ್ಕ್​- ರೂ.21900-43100/-
  • ಮಾರಾಟ ಪ್ರತಿನಿಧಿ- ರೂ.28950-55350/-

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: msilonline.com

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ