AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನಬಾರ್ಡ್‌ನಿಂದ ಸಿಹಿಸುದ್ದಿ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) 162 ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಪದವೀಧರರು nabard.org ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ 21-35. ಪೂರ್ವ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯುತ್ತದೆ.

NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ
ಸರ್ಕಾರಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on: Jan 18, 2026 | 3:28 PM

Share

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ, ನಬಾರ್ಡ್ ಗುಡ್​ ನ್ಯೂಸ್​ ಪ್ರಕಟಿಸಿದೆ. ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್ nabard.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಧಿಕೃತ ಅಧಿಸೂಚನೆಯಲ್ಲಿ ಈ ನೇಮಕಾತಿಯನ್ನು ಗ್ರೂಪ್ ಬಿ ಕೇಡರ್ ಅಡಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಈ ನೇಮಕಾತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವುದು ಮತ್ತು ಆಯ್ಕೆಯಾದ ಅಭ್ಯರ್ಥಿಗಳನ್ನು ವಿವಿಧ ನಬಾರ್ಡ್ ಕಚೇರಿಗಳಿಗೆ ನೇಮಿಸಲಾಗುವುದು. ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ವಿವರವಾದ ಜಾಹೀರಾತು ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ:

ಅಭಿವೃದ್ಧಿ ಸಹಾಯಕ ಹುದ್ದೆಗೆ ಅಭ್ಯರ್ಥಿಗಳು ಬಿ.ಎ. ಅಥವಾ ಬಿ.ಕಾಂ. ಪದವಿ ಪಡೆದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು, ಆದರೆ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರ ಅಭ್ಯರ್ಥಿಗಳು ಕೇವಲ ಪದವಿ ಪಡೆದಿದ್ದರೆ ಸಾಕು. ಅಭಿವೃದ್ಧಿ ಸಹಾಯಕ (ಹಿಂದಿ) ಹುದ್ದೆಗೆ ಹಿಂದಿ ಅಥವಾ ಇಂಗ್ಲಿಷ್ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಹಿಂದಿಯಿಂದ ಇಂಗ್ಲಿಷ್‌ಗೆ ಮತ್ತು ಹಿಂದಿಗೆ ಭಾಷಾಂತರಿಸುವ ಉತ್ತಮ ಸಾಮರ್ಥ್ಯವನ್ನು ಹೊಂದಿರಬೇಕು.

ಅಭ್ಯರ್ಥಿಗಳು 21 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು. ಈ ಅರ್ಹತೆ ಮತ್ತು ವಯಸ್ಸಿನ ಅವಶ್ಯಕತೆಗಳು ಹಿಂದಿನ ನೇಮಕಾತಿಯನ್ನು ಆಧರಿಸಿವೆ ಮತ್ತು ಹೊಸ ವಿವರವಾದ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ನಬಾರ್ಡ್ ಅಭಿವೃದ್ಧಿ ಸಹಾಯಕ ನೇಮಕಾತಿ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಹಿಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ಅಂತಿಮ ಆಯ್ಕೆಯು ಎಲ್ಲಾ ಹಂತಗಳಲ್ಲಿನ ಕಾರ್ಯಕ್ಷಮತೆ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳು ನಬಾರ್ಡ್ ವೆಬ್‌ಸೈಟ್‌ಗೆ ಭೇಟಿ ನೀಡಿ ವೃತ್ತಿ ಸೂಚನೆಗಳ ವಿಭಾಗದಲ್ಲಿ ಲಭ್ಯವಿರುವ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಬಹುದು. ಹೊಸ ಅಭ್ಯರ್ಥಿಗಳು ಮೊದಲು ನೋಂದಾಯಿಸಿಕೊಳ್ಳಬೇಕು, ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಬಹು ಮುಖ್ಯವಾಗಿ ಅಭ್ಯರ್ಥಿಗಳು ಅರ್ಜಿ ನಮೂನೆಯ ಪ್ರತಿಯನ್ನು ಇಟ್ಟುಕೊಳ್ಳುವುದು ಅಗತ್ಯ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ