NABARD Recruitment 2022: ನಬಾರ್ಡ್‌ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
NABARD Recruitment 2022: ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನ, ಆಯ್ಕೆ ವಿಧಾನ ಇತ್ಯಾದಿ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

NABARD Recruitment 2022: ಭಾರತದ ಸಾರ್ವಜನಿಕ ವಲಯ ಸಂಸ್ಥೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ಗುತ್ತಿಗೆ ಆಧಾರದ ಮೇಲೆ ಆಫೀಸರ್ ಗ್ರೇಡ್ ಎ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನ, ಆಯ್ಕೆ ವಿಧಾನ ಇತ್ಯಾದಿ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 170
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್ – ಗ್ರೇಡ್ ಎ ಹುದ್ದೆಗಳು
- ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವಾ ಹುದ್ದೆಗಳು: 161
- ರಾಜಭಾಷಾ ಸೇವಾ ಹುದ್ದೆಗಳು: 7
- ಪ್ರೋಟೋಕಾಲ್ ಮತ್ತು ಭದ್ರತಾ ಸೇವೆಯ ಹುದ್ದೆಗಳು: 2
ವಿದ್ಯಾರ್ಹತೆ: ಆಯಾ ಹುದ್ದೆಗಳಿಗೆ ಆಯಾ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತಾದ ಸಂಪೂರ್ಣ ವಿವರಗಳನ್ನು ಇಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಗ್ರೇಡ್ A RDBS ಮತ್ತು ರಾಜಭಾಷಾ ಹುದ್ದೆಗಳಿಗೆ – 21 ರಿಂದ 30 ವರ್ಷಗಳು ಗ್ರೇಡ್ AP & SS ಹುದ್ದೆಗಳಿಗೆ – 25 ರಿಂದ 40 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ: ಜುಲೈ 18, 2022. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 7, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.








