NABARD Recruitment 2022: ನಬಾರ್ಡ್ ನೇಮಕಾತಿ: ತಿಂಗಳ ವೇತನ 34 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Oct 06, 2022 | 5:09 PM

NABARD Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NABARD Recruitment 2022: ನಬಾರ್ಡ್ ನೇಮಕಾತಿ: ತಿಂಗಳ ವೇತನ 34 ಸಾವಿರ ರೂ.
NABARD Recruitment 2022
Follow us on

NABARD Recruitment 2022: ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ನಲ್ಲಿನ ಅಭಿವೃದ್ಧಿ ಸಹಾಯಕ ಮತ್ತು ಅಭಿವೃದ್ಧಿ ಸಹಾಯಕ (ಹಿಂದಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 177

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಅಭಿವೃದ್ಧಿ ಸಹಾಯಕ- ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
  • ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
    ಅಭಿವೃದ್ಧಿ ಸಹಾಯಕ (ಹಿಂದಿ) – ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹಿಂದಿ ಅಥವಾ ಇಂಗ್ಲಿಷ್ ಅನ್ನು ಕಡ್ಡಾಯ ಅಥವಾ ಪ್ರಮುಖ ವಿಷಯವಾಗಿ ಹೊಂದಿರುವ ಪದವೀಧರರಾಗಿರಬೇಕು. ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮುಖ್ಯ ವಿಷಯವಾಗಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪದವೀಧರರಾಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS- ರೂ. 450
  • SC/ST/PWD/EWS/Ex-Servicemen- ರೂ. 50

ವೇತನ:

  • ಅಭಿವೃದ್ಧಿ ಸಹಾಯಕ – ರೂ. 13150 ರಿಂದ 34990 ರೂ.
  • ಅಭಿವೃದ್ಧಿ ಸಹಾಯಕ (ಹಿಂದಿ) – ರೂ. 13150 ರಿಂದ 34990 ರೂ.

ಆಯ್ಕೆ ಪ್ರಕ್ರಿಯೆ:

  • ಪ್ರಿಲಿಮ್ಸ್ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
  • ಪ್ರಮಾಣ ಪತ್ರಗಳ ಪರಿಶೀಲನೆ

ಈ ಮೇಲಿನ ಪರೀಕ್ಷೆ ಹಾಗೂ ಪರಿಶೀಲನೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 10, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.