NDA Recruitment 2023: ನೀವು SSLC ಹಾಗೂ PUC ನಲ್ಲಿ ಪಾಸ್ ಆಗಿದ್ದೀರಾ? ಜೊತೆಗೆ ಈ ವಿದ್ಯಾರ್ಹತೆಯೊಂದಿಗೆ ಸರ್ಕಾರಿ ನೌಕರಿಯನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಅಂದರೆ ಎನ್.ಡಿ.ಎ. ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ನಿಮಗೆ ಇರಬೇಕಾದ ವಿದ್ಯಾರ್ಹತೆ ಎಂದರೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಅಷ್ಟೇ. ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಈ ಮೂಲಕ ಲೋವರ್ ಡಿವಿಷನ್ ಕ್ಲರ್ಕ್, ಪೇಂಟರ್, ಡ್ರಾಟ್ಸ್ ಮನ್, ಕುಕ್, ಫೈರ್ ಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಬಳಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪ್ರಮಾಣಪತ್ರಗಳಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಎನ್ಡಿಎಯ ಅಧಿಕೃತ ವೆಬ್‌ಸೈಟ್ ndacivrect.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿಗಾಗಿ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಅಲ್ಲದೆ ಇಂದಿನಿಂದ (ಜನವರಿ 1) 21 ದಿನಗಳ ಒಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಂದರೆ, ನೀವು ಜನವರಿ 20 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಕೆಲ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 25 ಎಂದು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸ್ಕ್ರೀನ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಟ್ಟು ಖಾಲಿ ಹುದ್ದೆಗಳ 10 ಪಟ್ಟು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
ವಿಶೇಷ ಸೂಚನೆ: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಅಂದರೆ ಕೆಲ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅಧಿಸೂಚನೆಯನ್ನು ಪರಿಶೀಲಿಸಿದ ಬಳಿಕ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಖಚಿತಪಡಿಸಿ ಅರ್ಜಿಗಳನ್ನು ಭರ್ತಿ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.