NBCC Recruitment 2022: ಎನ್‌ಬಿಸಿಸಿ ನೇಮಕಾತಿ: ತಿಂಗಳ ವೇತನ 2 ಲಕ್ಷ ರೂ.
NBCC RECRUITMENT 2022: ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ 60% ಒಟ್ಟು ಅಂಕಗಳೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ ಮಾಡಿರಬೇಕು.
NBCC Recruitment 2022: ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವ ಅಭ್ಯರ್ಥಿಗಳಿಗೆ NBCC ಯಲ್ಲಿದೆ ಸುವರ್ಣಾವಕಾಶ. ಎನ್‌ಬಿಸಿಸಿ ಜೂನಿಯರ್ ಇಂಜಿನಿಯರ್ (ಜೆಇ) ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಏಪ್ರಿಲ್ 2022. ಹೀಗಾಗಿ ಆದಷ್ಟು ಬೇಗ NBCC ಯ ಅಧಿಕೃತ ವೆಬ್‌ಸೈಟ್ nbccindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಜೂನಿಯರ್ ಇಂಜಿನಿಯರ್ 60 ಹುದ್ದೆಗಳು ಮತ್ತು ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) 20 ಹುದ್ದೆಗಳಿವೆ. ಇದಲ್ಲದೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ 1 ಹುದ್ದೆಗೆ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾವನ್ನು ಮಾಡಿರಬೇಕು. ಜೂನಿಯರ್ ಇಂಜಿನಿಯರ್ ಎಲೆಕ್ಟ್ರಿಕಲ್ ಹುದ್ದೆಗೆ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾವನ್ನು ಹೊಂದಿರುವುದು ಕಡ್ಡಾಯವಾಗಿದೆ ಮತ್ತು ಡಿಜಿಎಂಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ 9 ವರ್ಷಗಳ ಅನುಭವದೊಂದಿಗೆ ಸಿವಿಲ್ ಎಂಜಿನಿಯರಿಂಗ್ ಮಾಡಿರಬೇಕಾಗುತ್ತದೆ.
NBCC Recruitment 2022: ವಿದ್ಯಾರ್ಹತೆ: JE ಸಿವಿಲ್ – ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ 60% ಒಟ್ಟು ಅಂಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ ಮಾಡಿರಬೇಕು.
JE ಎಲೆಕ್ಟ್ರಿಕಲ್ – ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ 60% ಒಟ್ಟು ಅಂಕಗಳೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ ಮಾಡಿರಬೇಕು.
DGM – 60% ಒಟ್ಟು ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಹೊಂದಿರಬೇಕು. ಅಲ್ಲದೆ 9 ವರ್ಷಗಳ ಅನುಭವ ಹೊಂದಿರಬೇಕು.
NBCC Recruitment 2022: ವಯೋಮಿತಿ: ಜೂನಿಯರ್ ಇಂಜಿನಿಯರ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್) – 28 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡೆಪ್ಯುಟಿ ಜನರಲ್ ಮ್ಯಾನೇಜರ್ – 46 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
NBCC Recruitment 2022: ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 500/- ಪಾತಿಸಬೇಕು. ಹಾಗೆಯೇ SC, ST, PWD ಮತ್ತು ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
NBCC Recruitment 2022: ಸಂಬಳ ಜೂನಿಯರ್ ಇಂಜಿನಿಯರ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್) – ರೂ. 27,270 ಡೆಪ್ಯುಟಿ ಜನರಲ್ ಮ್ಯಾನೇಜರ್ – ರೂ 70,000 ರಿಂದ 2,00000
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?