NBCC Recruitment 2022: NBC ಕಾರ್ಪೊರೇಷನ್ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
NBCC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NBCC ಯ ಅಧಿಕೃತ ವೆಬ್‌ಸೈಟ್ nbccindia.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
NBCC Recruitment 2022: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ (NBCC) ಜೂನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NBCC ಯ ಅಧಿಕೃತ ವೆಬ್‌ಸೈಟ್ nbccindia.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
NBCC ಹುದ್ದೆಗಳ ವಿವರಗಳು: ಒಟ್ಟು ಖಾಲಿ ಹುದ್ದೆ – 81 ಹುದ್ದೆಗಳು ಜೂನಿಯರ್ ಇಂಜಿನಿಯರ್ – 80 ಹುದ್ದೆಗಳು ಡೆಪ್ಯುಟಿ ಜನರಲ್ ಮ್ಯಾನೇಜರ್ – 1 ಹುದ್ದೆ
NBCC Recruitment 2022: ಗರಿಷ್ಠ ವಯೋಮಿತಿ: ಜೂನಿಯರ್ ಇಂಜಿನಿಯರ್- 28 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದು. ಡೆಪ್ಯುಟಿ ಜನರಲ್ ಮ್ಯಾನೇಜರ್- 46 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದು
NBCC Recruitment 2022: ವೇತನ? ಎನ್‌ಬಿಸಿಸಿಯಲ್ಲಿ ಜೂನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದರೆ ಮಾಸಿಕ ವೇತನಾಗಿ ಪ್ರತಿ 27270 ರೂ. ಸಿಗಲಿದೆ.
NBCC Recruitment 2022: ಶೈಕ್ಷಣಿಕ ಅರ್ಹತೆ: ಜೂನಿಯರ್ ಇಂಜಿನಿಯರ್ ಸಿವಿಲ್/ಎಲೆಕ್ಟ್ರಿಕಲ್ – ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ಸ್ಟ್ರೀಮ್‌ನಲ್ಲಿ ಮೂರು ವರ್ಷಗಳ ಪೂರ್ಣ ಸಮಯದ ಡಿಪ್ಲೊಮಾ ಮಾಡಿರಬೇಕು. ಡೆಪ್ಯುಟಿ ಜನರಲ್ ಮ್ಯಾನೇಜರ್ – ಕನಿಷ್ಠ 60% ಅಂಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪೂರ್ಣ ಸಮಯದ ಪದವಿ ಜೊತೆಗೆ ಒಂಬತ್ತು ವರ್ಷಗಳ ಅನುಭವ ಹೊಂದಿರಬೇಕು.
NBCC Recruitment 2022: ಆಯ್ಕೆ ಪ್ರಕ್ರಿಯೆ ಹೇಗೆ? ಜೂನಿಯರ್ ಇಂಜಿನಿಯರ್- ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ಡಿಜಿಎಂ- ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
NBCC Recruitment 2022: ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- 500/-ರೂ (ಎಸ್‌ಸಿ, ಎಸ್‌ಟಿ, ದಿವ್ಯಾಂಗ ಮತ್ತು ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.)
NBCC Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 14, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(NBCC Recruitment 2022 – Apply Online 81 Junior Engineer)