
ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ.
ಮುಖ್ಯವಾಗಿ ಸಿವಿಲ್, ಎಲೆಕ್ಟ್ರಿಕಲ್, ಸಿಗ್ನಲಿಂಗ್ ಮತ್ತು ದೂರಸಂಪರ್ಕ ವಿಭಾಗಗಳಲ್ಲಿ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ (Civil/Electrical/Electronics) ಬಿ.ಇ (BE) ಅಥವಾ ಬಿ.ಟೆಕ್ (B.Tech) ಪೂರ್ಣಗೊಳಿಸಿರಬೇಕು. ಹುದ್ದೆಯ ದರ್ಜೆಗೆ ಅನುಗುಣವಾಗಿ ಕನಿಷ್ಠ 3 ರಿಂದ 10 ವರ್ಷಗಳ ವೃತ್ತಿ ಅನುಭವ ಅಗತ್ಯವಿರುತ್ತದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ರಿಂದ 50 ವರ್ಷಗಳ ಒಳಗಿರಬೇಕು. ಸರ್ಕಾರಿ ನಿಯಮಾವಳಿಯಂತೆ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹಿರಿಯ ಮಟ್ಟದ ಹುದ್ದೆಗಳಿಗೆ ಮಾಸಿಕ ರೂ. 50,000 ರಿಂದ ರೂ. 2,00,000 ವರೆಗೆ (IDA ಸ್ಕೇಲ್) ವೇತನ ನೀಡಲಾಗುತ್ತದೆ. ಇದರೊಂದಿಗೆ ವೈದ್ಯಕೀಯ ಭತ್ಯೆ, ಮನೆ ಬಾಡಿಗೆ ಭತ್ಯೆ (HRA) ಸೇರಿದಂತೆ ಕೇಂದ್ರ ಸರ್ಕಾರದ ಇತರೆ ಸೌಲಭ್ಯಗಳು ಸಿಗಲಿವೆ.
ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್ ನೇಮಕಾತಿ ಘೋಷಣೆ
ಯಾವುದೇ ಕಠಿಣ ಲಿಖಿತ ಪರೀಕ್ಷೆಯ ಬದಲಾಗಿ, ಸರಳವಾದ ಮೂರು ಹಂತಗಳಲ್ಲಿ ಆಯ್ಕೆ ನಡೆಯಲಿದೆ:
ಆಸಕ್ತರು NCRTC ಅಧಿಕೃತ ವೆಬ್‌ಸೈಟ್ www.ncrtc.in ಗೆ ಭೇಟಿ ನೀಡಿ, ‘Careers’ ವಿಭಾಗದಲ್ಲಿ ಲಭ್ಯವಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಮೇ 9ರ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸಿ.
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:57 pm, Fri, 8 May 26