AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Result 2025: NEET UG ಫಲಿತಾಂಶ ಇಂದೇ ಪ್ರಕಟವಾಗುವ ಸಾಧ್ಯತೆ: ರಿಸಲ್ಟ್​​ ಹೀಗೆ ಚೆಕ್ ಮಾಡಿ!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು (ಜೂನ್ 14) NEET UG ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಅಭ್ಯರ್ಥಿಗಳು neet.nta.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ಮತ್ತು ಸ್ಕೋರ್‌ಕಾರ್ಡ್ ಅನ್ನು ಪರಿಶೀಲಿಸಬಹುದು. ಫಲಿತಾಂಶದೊಂದಿಗೆ ಮೆರಿಟ್ ಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನೂ ಬಿಡುಗಡೆ ಮಾಡಲಾಗುವುದು. ಪ್ರಕ್ರಿಯೆ ಸರಳವಾಗಿದ್ದು, ವೆಬ್‌ಸೈಟ್‌ಗೆ ಭೇಟಿ ನೀಡಿ, ಲಾಗಿನ್ ಮಾಡಿ ಮತ್ತು ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ.

NEET Result 2025: NEET UG  ಫಲಿತಾಂಶ ಇಂದೇ ಪ್ರಕಟವಾಗುವ ಸಾಧ್ಯತೆ: ರಿಸಲ್ಟ್​​ ಹೀಗೆ ಚೆಕ್ ಮಾಡಿ!
Neet 2025 Results
ಅಕ್ಷತಾ ವರ್ಕಾಡಿ
|

Updated on: Jun 14, 2025 | 1:04 PM

Share

2024- 25ನೇ ಸಾಲಿನ NEET UG ಫಲಿತಾಂಶ ಇಂದು (ಜೂನ್ 14) ಪ್ರಕಟವಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಜೂನ್ 3 ರಂದು OMR ಶೀಟ್‌ನೊಂದಿಗೆ NEET UG ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿತು ಮತ್ತು ಅಭ್ಯರ್ಥಿಗಳು ಜೂನ್ 5 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಈ ಬಾರಿ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದು ವರದಿಯಾಗಿದೆ.

NTA ಇತ್ತೀಚಿಗಷ್ಟೇ ಹೊರಡಿಸಿದ ಅಧಿಸೂಚನೆಯಲ್ಲಿ, ಜೂನ್ 14 ರೊಳಗೆ ಫಲಿತಾಂಶವನ್ನು ಘೋಷಿಸುವುದಾಗಿ ತಿಳಿಸಿದೆ. ಫಲಿತಾಂಶ ಬಿಡುಗಡೆಯಾದಾಗ, ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು neet.nta.nic.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಫಲಿತಾಂಶ ಪರಿಶೀಲಿಸಬಹುದು. ಫಲಿತಾಂಶದ ಜೊತೆಗೆ, ಮೆರಿಟ್ ಪಟ್ಟಿ, ಕಟ್-ಆಫ್ ಮತ್ತು ಅಂಕಪಟ್ಟಿ ಸಹ ಬಿಡುಗಡೆಯಾಗುತ್ತದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು NEET ನ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು.

ಇದನ್ನೂ ಓದಿ: ಕರ್ನಾಟಕದ ಬಹುತೇಕ ವಿವಿಗಳಲ್ಲಿ ಪ್ರಾಧ್ಯಾಪಕರ ಕೊರತೆ: ಸ್ನಾತಕೋತ್ತರ ವಿಧ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಸಿತದ ಆತಂಕ

ಫಲಿತಾಂಶ ಪರಿಶೀಲಿಸುವುದು ಹೇಗೆ?

  • ಮೊದಲು NEET ಅಧಿಕೃತ ವೆಬ್‌ಸೈಟ್ neet.nta.nic.in ಗೆ ಹೋಗಿ.
  • ನಂತರ ಮುಖಪುಟದಲ್ಲಿ NEET UG 2025 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅದರ ನಂತರ ನಿಮ್ಮ ಲಾಗಿನ್ ಆಗಲು ದಾಖಲೆಗಳನ್ನು ನಮೂದಿಸಿ.
  • ಈಗ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಿ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ