
2024- 25ನೇ ಸಾಲಿನ NEET UG ಫಲಿತಾಂಶ ಇಂದು (ಜೂನ್ 14) ಪ್ರಕಟವಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಜೂನ್ 3 ರಂದು OMR ಶೀಟ್‌ನೊಂದಿಗೆ NEET UG ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿತು ಮತ್ತು ಅಭ್ಯರ್ಥಿಗಳು ಜೂನ್ 5 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಈ ಬಾರಿ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದು ವರದಿಯಾಗಿದೆ.
NTA ಇತ್ತೀಚಿಗಷ್ಟೇ ಹೊರಡಿಸಿದ ಅಧಿಸೂಚನೆಯಲ್ಲಿ, ಜೂನ್ 14 ರೊಳಗೆ ಫಲಿತಾಂಶವನ್ನು ಘೋಷಿಸುವುದಾಗಿ ತಿಳಿಸಿದೆ. ಫಲಿತಾಂಶ ಬಿಡುಗಡೆಯಾದಾಗ, ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು neet.nta.nic.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಫಲಿತಾಂಶ ಪರಿಶೀಲಿಸಬಹುದು. ಫಲಿತಾಂಶದ ಜೊತೆಗೆ, ಮೆರಿಟ್ ಪಟ್ಟಿ, ಕಟ್-ಆಫ್ ಮತ್ತು ಅಂಕಪಟ್ಟಿ ಸಹ ಬಿಡುಗಡೆಯಾಗುತ್ತದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು NEET ನ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು.
ಇದನ್ನೂ ಓದಿ: ಕರ್ನಾಟಕದ ಬಹುತೇಕ ವಿವಿಗಳಲ್ಲಿ ಪ್ರಾಧ್ಯಾಪಕರ ಕೊರತೆ: ಸ್ನಾತಕೋತ್ತರ ವಿಧ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಸಿತದ ಆತಂಕ
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ.