AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026ರ NEET-UG ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು NTA ಮಾರ್ಚ್ 11ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಿದೆ. ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು, ಈ ಅವಕಾಶವನ್ನು ಬಳಸಿಕೊಂಡು ಕೂಡಲೇ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಶುಲ್ಕ ಪಾವತಿಗೆ ಮಾರ್ಚ್ 11ರ ರಾತ್ರಿ 11:59ರವರೆಗೆ ಸಮಯವಿದೆ. ಸರ್ವರ್ ಸಮಸ್ಯೆ ತಪ್ಪಿಸಲು ಬೇಗನೆ ಅರ್ಜಿ ಸಲ್ಲಿಸುವುದು ಉತ್ತಮ.

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
ಅಕ್ಷತಾ ವರ್ಕಾಡಿ
|

Updated on: Mar 10, 2026 | 1:43 PM

Share

2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ (ಅಥವಾ ಜೈವಿಕ ತಂತ್ರಜ್ಞಾನ) ವಿಷಯಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ಇಂಟರ್ಮೀಡಿಯೇಟ್ ಅಥವಾ ಪಿಯುಸಿ ಉತ್ತೀರ್ಣರಾದ ಹಾಗೂ ಕನಿಷ್ಠ 17 ವರ್ಷ ವಯೋಮಿತಿ ಹೊಂದಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1700, ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ವರ್ಗದವರಿಗೆ ರೂ. 1600 ಹಾಗೂ ಎಸ್‌ಸಿ/ಎಸ್‌ಟಿ/ದಿವ್ಯಾಂಗ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ. 1000 ನೋಂದಣಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಪೆನ್ ಮತ್ತು ಪೇಪರ್ (ಆಫ್‌ಲೈನ್) ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು 011-40759000/69227700 ಸಂಖ್ಯೆಗಳನ್ನು ಅಥವಾ neetug2026@nta.ac.in ಇ-ಮೇಲ್ ಅನ್ನು ಸಂಪರ್ಕಿಸಬಹುದಾಗಿದೆ. ಸರ್ವರ್ ಡೌನ್​ ಸಮಸ್ಯೆ ತಪ್ಪಿಸಲು ಕೊನೆಯ ಕ್ಷಣದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸುವುದು ಉತ್ತಮ ಎಂದು NTA ಸೂಚಿಸಿದೆ.

NEET UG ಆನ್‌ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!