AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-UG 2026: ನೀಟ್ ಯುಜಿ ಪರೀಕ್ಷೆ; ಹೇಳಿಕೆ ಆಧಾರಿತ ಉದ್ದನೆಯ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಹೈರಾಣು!

NEET-UG 2026 ಪರೀಕ್ಷೆ ಮುಕ್ತಾಯಗೊಂಡಿದ್ದು, ಕರ್ನಾಟಕದ 1.45 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸುದೀರ್ಘ ಹೇಳಿಕೆ ಆಧಾರಿತ ಪ್ರಶ್ನೆಗಳಿಂದ ಸಮಯ ನಿರ್ವಹಣೆ ಸವಾಲಾಗಿತ್ತು. ಎನ್‌ಸಿಇಆರ್‌ಟಿ ಪಠ್ಯಕ್ರಮವಿದ್ದರೂ, ಪ್ರಶ್ನೆಗಳ ಸ್ವರೂಪ ವಿದ್ಯಾರ್ಥಿಗಳನ್ನು ಕಂಗೆಡಿಸಿತು. ಕೆಲ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆಯಾಗಿದ್ದು, ಈ ವರ್ಷ ಕಟ್-ಆಫ್ ಅಂಕಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.

NEET-UG 2026: ನೀಟ್ ಯುಜಿ ಪರೀಕ್ಷೆ; ಹೇಳಿಕೆ ಆಧಾರಿತ ಉದ್ದನೆಯ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಹೈರಾಣು!
ನೀಟ್ ಯುಜಿ ಪರೀಕ್ಷೆImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 04, 2026 | 10:32 AM

Share

ಬೆಂಗಳೂರು: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG 2026) ಭಾನುವಾರ ಮುಕ್ತಾಯಗೊಂಡಿದೆ. ಈ ಬಾರಿ ಕರ್ನಾಟಕದ ಸುಮಾರು 1.45 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಪ್ರಶ್ನೆ ಪತ್ರಿಕೆಯಲ್ಲಿದ್ದ ಸುದೀರ್ಘವಾದ ‘ಹೇಳಿಕೆ ಆಧಾರಿತ’ ಪ್ರಶ್ನೆಗಳು ಅಭ್ಯರ್ಥಿಗಳ ಬೆವರಿಸುವಂತೆ ಮಾಡಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಈ ಸ್ಪರ್ಧಾತ್ಮಕ ಪರೀಕ್ಷೆಯು ಒಟ್ಟು 720 ಅಂಕಗಳಿಗೆ ನಡೆದಿದ್ದು, ಬಹುತೇಕ ಪ್ರಶ್ನೆಗಳು ಎನ್‌ಸಿಇಆರ್‌ಟಿ (NCERT) ಪಠ್ಯಕ್ರಮಕ್ಕೆ ಅನುಗುಣವಾಗಿಯೇ ಇತ್ತು. ಆದರೆ, ಪ್ರಶ್ನೆಗಳ ಸ್ವರೂಪವು ಸಮಯ ನಿರ್ವಹಣೆಗೆ ಅಡ್ಡಿಯುಂಟುಮಾಡಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಸಮಯ ಕಿತ್ತುಕೊಂಡ ‘ಸ್ಟೇಟ್‌ಮೆಂಟ್’ ಪ್ರಶ್ನೆಗಳು:

ಈ ವರ್ಷದ ಪರೀಕ್ಷೆಯಲ್ಲಿ ನೇರ ಪ್ರಶ್ನೆಗಳಿಗಿಂತ ಹೆಚ್ಚಾಗಿ ‘ಹೇಳಿಕೆ ಆಧಾರಿತ’ (Statement-based), ‘ಸರಿ-ತಪ್ಪು ಪತ್ತೆಹಚ್ಚುವಿಕೆ’ ಮತ್ತು ‘ಹೊಂದಿಸಿ ಬರೆಯಿರಿ’ ಮಾದರಿಯ ಪ್ರಶ್ನೆಗಳು ಅತಿ ಹೆಚ್ಚಾಗಿದ್ದವು. ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಭಾಗದಲ್ಲಿ ಪ್ರತಿಯೊಂದು ಆಯ್ಕೆಯನ್ನು ಕೂಲಂಕಷವಾಗಿ ಓದಿ ಅರ್ಥೈಸಿಕೊಳ್ಳಲು ಹೆಚ್ಚಿನ ಸಮಯ ವ್ಯಯವಾಗಿದ್ದರಿಂದ, ಭೌತಶಾಸ್ತ್ರದ ಲೆಕ್ಕಾಚಾರಗಳನ್ನು ಪೂರ್ಣಗೊಳಿಸಲು ವಿದ್ಯಾರ್ಥಿಗಳು ಪರದಾಡುವಂತಾಯಿತು.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ತಡವಾಗಿ ಬಂದವರಿಗೆ ನಿರಾಕರಣೆ:

ಬೆಂಗಳೂರಿನ ಶೇಷಾದ್ರಿ ರಸ್ತೆಯ ಆರ್‌ಸಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ವಿದ್ಯಾರ್ಥಿಗಳು ನಿಗದಿತ ಸಮಯಕ್ಕಿಂತ ಕೇವಲ 5-10 ನಿಮಿಷ ತಡವಾಗಿ ಬಂದ ಕಾರಣ ಅವರಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನಿರಾಕರಿಸಲಾಯಿತು. ಸಂಚಾರ ದಟ್ಟಣೆ ಮತ್ತು ಅಗತ್ಯ ದಾಖಲೆಗಳನ್ನು ಮರೆತು ಬಂದಿದ್ದರಿಂದ ವಿಳಂಬವಾಗಿದ್ದು, ಪರೀಕ್ಷೆ ಬರೆಯಲಾಗದೆ ವಿದ್ಯಾರ್ಥಿಗಳು ಕಣ್ಣೀರಿಡುತ್ತಾ ಮರಳಿದ ದೃಶ್ಯ ಕಂಡುಬಂದಿತು.

ಒಟ್ಟಾರೆಯಾಗಿ, ಈ ಬಾರಿಯ ಕಟ್-ಆಫ್ ಅಂಕಗಳು ಕಳೆದ ವರ್ಷಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಪರೀಕ್ಷೆ ಬರೆದ ಬಹುತೇಕರು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್