NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ
ಧಾರವಾಡದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU), ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. M.Sc, ME/M.Tech, Ph.D ಅರ್ಹತೆಯುಳ್ಳ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದವರಿಗೆ ತಿಂಗಳಿಗೆ 75,000-90,000 ರೂ. ವೇತನ ಸಿಗಲಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶ.

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
NFSU ಹುದ್ದೆಯ ಅಧಿಸೂಚನೆ:
- ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU)
- ಹುದ್ದೆಗಳ ಸಂಖ್ಯೆ: 5
- ಉದ್ಯೋಗ ಸ್ಥಳ: ಧಾರವಾಡ
- ಹುದ್ದೆಯ ಹೆಸರು: ಸಹಾಯಕ ಪ್ರಾಧ್ಯಾಪಕ
- ವೇತನ: ತಿಂಗಳಿಗೆ 75,000 – 90,000 ರೂ.
ಶೈಕ್ಷಣಿಕ ಅರ್ಹತೆ:
NFSU ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc , ME/ M.Tech, Ph.D ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-12-2025 ರಂತೆ 45 ವರ್ಷ ಮೀರಬಾರದು.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: 1,000 ರೂ.
- ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು:500 ರೂ.
ಇದನ್ನೂ ಓದಿ: 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲನೆಯದಾಗಿ NFSU ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- NFSU ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ.
- ಅರ್ಜಿ ನಮೂನೆಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
- ಬಹು ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ ಇಟ್ಟುಕೊಳ್ಳಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:14 pm, Thu, 18 December 25




