NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jun 17, 2022 | 5:46 PM

NHAI Deputy Manager Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
NHAI Recruitment 2022
Follow us on

NHAI Deputy Manager Recruitment 2022: ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 50

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಹೆಸರು: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳು

ವೇತನ ಶ್ರೇಣಿ: ತಿಂಗಳಿಗೆ ರೂ. 39,100/-

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆಗಳು: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. UPSC ನಡೆಸುವ 2021 ರ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ (ಸಿವಿಲ್) ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ಬರೆದಿರಬೇಕು.

ಆಯ್ಕೆ ವಿಧಾನ: UPSC ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆ 2021 ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 13, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.