NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Aug 15, 2022 | 8:00 AM

NHAI Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
NHAI Recruitment 2022
Follow us on

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 30 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 30

ಅರ್ಹತಾ ಮಾನದಂಡ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಎಲ್​ಎಲ್​ಪಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 32 ವರ್ಷಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ:
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 60 ಸಾವಿರ ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್​​ 9, 2022

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾದ ಆಯ್ಕೆಯನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.