NHAI Recruitment 2022: ಪದವೀಧರರಿಗೆ ಉದ್ಯೋಗಾವಕಾಶ: ಮಾಸಿಕ ವೇತನ 2 ಲಕ್ಷ ರೂ.

NHAI Recruitment 2022: ಈ ನೇಮಕಾತಿ ಅಡಿಯಲ್ಲಿ ಪದವೀಧರರನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಹೀಗಾಗಿ ಯಾವುದೇ ವಿಷಯದಲ್ಲಿ ಡಿಗ್ರಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ನೇಮಕಾತಿಗಾಗಿ ಬೇಕಿರುವ ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NHAI Recruitment 2022: ಪದವೀಧರರಿಗೆ ಉದ್ಯೋಗಾವಕಾಶ: ಮಾಸಿಕ ವೇತನ 2 ಲಕ್ಷ ರೂ.
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 26, 2022 | 4:01 PM

NHAI Recruitment 2022: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮ್ಯಾನೇಜರ್ ( ತಾಂತ್ರಿಕ ), ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್ ಅಥಾರಿಟಿಯ (NHAI) ಅಧಿಕೃತ ವೆಬ್​ಸೈಟ್ nhai.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಡಿಯಲ್ಲಿ ಪದವೀಧರರನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಹೀಗಾಗಿ ಯಾವುದೇ ವಿಷಯದಲ್ಲಿ ಡಿಗ್ರಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ನೇಮಕಾತಿಗಾಗಿ ಬೇಕಿರುವ ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 37

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 7, 2022 ರಂತೆ ಗರಿಷ್ಠ 56 ವರ್ಷಗಳೊಳಗಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ: ಈ ನೇಮಕಾತಿ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 15,600/- ರಿಂದ 2,08,700/-ರೂ. ವರೆಗೆ ವೇತನವನ್ನು ನಿಗದಿ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 7, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Mon, 26 September 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ