NHAI Recruitment 2022: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮ್ಯಾನೇಜರ್ ( ತಾಂತ್ರಿಕ ), ಹಿಂದಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್ ಅಥಾರಿಟಿಯ (NHAI) ಅಧಿಕೃತ ವೆಬ್‌ಸೈಟ್ nhai.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಡಿಯಲ್ಲಿ ಪದವೀಧರರನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಹೀಗಾಗಿ ಯಾವುದೇ ವಿಷಯದಲ್ಲಿ ಡಿಗ್ರಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ನೇಮಕಾತಿಗಾಗಿ ಬೇಕಿರುವ ಅರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 37
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 7, 2022 ರಂತೆ ಗರಿಷ್ಠ 56 ವರ್ಷಗಳೊಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಈ ನೇಮಕಾತಿ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 15,600/- ರಿಂದ 2,08,700/-ರೂ. ವರೆಗೆ ವೇತನವನ್ನು ನಿಗದಿ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 7, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 4:01 pm, Mon, 26 September 22