NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 67 ಸಾವಿರ ರೂ.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ತಿಂಗಳ ವೇತನ 67 ಸಾವಿರ ರೂ.
NHAI Recruitment 2022

NHAI Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

TV9kannada Web Team

| Edited By: Zahir PY

Apr 30, 2022 | 10:30 PM

NHAI Recruitment 2022: ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮುಖ್ಯ ಜನರಲ್ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ನೇಮಕಾತಿ ವಿವರಗಳು:

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 8

ಹುದ್ದೆಗಳ ವಿವರಗಳು: ಮುಖ್ಯ ಜನರಲ್ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳು

ವೇತನ ಶ್ರೇಣಿ : ತಿಂಗಳಿಗೆ 37,400 ರೂ.ನಿಂದ 67,000 ರೂ.ವರೆಗೆ ವೇತನ ಸಿಗಲಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 48 ವರ್ಷಗಳನ್ನು ಮೀರಿರಬಾರದು.

ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು ಹಾಗೂ ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಆಯ್ಕೆ ಸಮಿತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 10, 2022.

ಅಂಚೆ ಮೂಲಕ ಅರ್ಜಿ ಕಳುಹಿಸಲು ಕೊನೆಯ ದಿನಾಂಕ : ಜೂನ್ 27, 2022.

ಅರ್ಜಿ ಕಳುಹಿಸಬೇಕಾದ ವಿಳಾಸ: DGM (HR & Admin), National Highways Authority of India (NHAI), Sector-10, Dwarka, New Delhi-110075

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on

Related Stories

Most Read Stories

Click on your DTH Provider to Add TV9 Kannada