NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
NHAI Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHAI ನ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
NHAI Recruitment 2023: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮ್ಯಾನೇಜರ್ (ಆಡಳಿತ ಮತ್ತು ಕಾನೂನು) ಮತ್ತು ಸಹಾಯಕ ವ್ಯವಸ್ಥಾಪಕ (ಕಾನೂನು) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHAI ನ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಮ್ಯಾನೇಜರ್ (ಆಡಳಿತ ಮತ್ತು ಕಾನೂನು) – 14 ಹುದ್ದೆಗಳು
- ಸಹಾಯಕ ವ್ಯವಸ್ಥಾಪಕ (ಕಾನೂನು) – 4 ಹುದ್ದೆಗಳು
- ಒಟ್ಟು ಹುದ್ದೆಗಳ ಸಂಖ್ಯೆ- 18
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಸಂಬಂಧಿತ ವಿಷಯದಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷಗಳಿಗಿಂತ ಮೀರಿರಬಾರದು. ಹಾಗೆಯೇ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 19, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:24 pm, Mon, 2 January 23