NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

| Updated By: Digi Tech Desk

Updated on: Jan 02, 2023 | 2:34 PM

NHAI Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHAI ನ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
NHAI Recruitment 2023
Follow us on

NHAI Recruitment 2023: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮ್ಯಾನೇಜರ್ (ಆಡಳಿತ ಮತ್ತು ಕಾನೂನು) ಮತ್ತು ಸಹಾಯಕ ವ್ಯವಸ್ಥಾಪಕ (ಕಾನೂನು) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHAI ನ ಅಧಿಕೃತ ವೆಬ್‌ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮ್ಯಾನೇಜರ್ (ಆಡಳಿತ ಮತ್ತು ಕಾನೂನು) – 14 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕ (ಕಾನೂನು) – 4 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 18

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಸಂಬಂಧಿತ ವಿಷಯದಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷಗಳಿಗಿಂತ ಮೀರಿರಬಾರದು. ಹಾಗೆಯೇ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 19, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

Published On - 2:24 pm, Mon, 2 January 23