NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುದ್ದೆಗೆ ಅರ್ಜಿ ಆಹ್ವಾನ: ವೇತನ 2 ಲಕ್ಷ ರೂ.

| Updated By: ಝಾಹಿರ್ ಯೂಸುಫ್

Updated on: Jul 06, 2023 | 2:23 PM

NHAI Recruitment 2023: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು.

NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುದ್ದೆಗೆ ಅರ್ಜಿ ಆಹ್ವಾನ: ವೇತನ 2 ಲಕ್ಷ ರೂ.
NHAI Recruitment 2023
Follow us on

NHAI Recruitment 2023: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಮೀಡಿಯಾ ರಿಲೇಷನ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್ nhai.gov.in​  ಗೆ ಭೇಟಿ ನೀಡುವ ಮೂಲಕ ಆನ್​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು. ಹಾಗೆಯೇ ಆಫ್​ಲೈನ್​ನಲ್ಲೂ ಅರ್ಜಿ ಕಳುಹಿಸಲು ಅವಕಾಶ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ ( NHAI )
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್ (ಮೀಡಿಯಾ ರಿಲೇಷನ್)

ಶೈಕ್ಷಣಿಕ ಅರ್ಹತೆ:

NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ/ಸಾರ್ವಜನಿಕ ಸಂಬಂಧಗಳಲ್ಲಿ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.78800 ರಿಂದ ರೂ. 209200/- ರವರೆಗೆ ಮಾಸಿಕ ವೇತನ ಸಿಗಲಿದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-08-2023

ಆಫ್​ಲೈನ್​ನಲ್ಲಿ ಅರ್ಜಿ ಕಳುಹಿಸಬೇಕಾದ ವಿಳಾಸ:

GM (HR & Admn)-III, National Highways Authority of India, Plot No.G5-&6, Sector-10, Dwarka, New Delhi-110075

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nhai.gov.in